Home ಸುದ್ದಿಗಳು ಫೆ.4 ರಿಂದ 6 ರ ವರೆಗೆ ಮಾರಿ ಜಾತ್ರಾ ಮಹೋತ್ಸವ: ಮದ್ಯ ಮಾರಾಟ ನಿಷೇಧಿಸಲು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶ

ಫೆ.4 ರಿಂದ 6 ರ ವರೆಗೆ ಮಾರಿ ಜಾತ್ರಾ ಮಹೋತ್ಸವ: ಮದ್ಯ ಮಾರಾಟ ನಿಷೇಧಿಸಲು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶ

0
ಫೆ.4 ರಿಂದ 6 ರ ವರೆಗೆ ಮಾರಿ ಜಾತ್ರಾ ಮಹೋತ್ಸವ: ಮದ್ಯ ಮಾರಾಟ ನಿಷೇಧಿಸಲು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶ

ಉಡುಪಿ: ಫೆಬ್ರವರಿ 4 ರಿಂದ 6 ರ ವರೆಗೆ ಕುಂದಾಪುರ ತಾಲೂಕಿನ ಶ್ರೀ ಮಹಾಂಕಾಳಿ ಅಮ್ಮನವರ ದೇವಸ್ಥಾನ ಖಾರ್ವಿಕೇರಿ ಗಂಗೊಳ್ಳಿಯಲ್ಲಿ ಮಾರಿ ಜಾತ್ರಾ ಮಹೋತ್ಸವವು ನಡೆಯಲಿದ್ದು, ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಠಿಯಿಂದ ಬಾರ್ ಮತ್ತು ವೈನ್‌ಶಾಪ್‌ಗಳನ್ನು ತೆರೆಯದಂತೆ ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶಿಸಿದ್ದಾರೆ.

ಬಾರ್ ಮತ್ತು ವೈನ್‌ಶಾಪ್‌ಗಳು ತೆರೆದಿದ್ದಲ್ಲಿ ಮದ್ಯ ಪಾನಾಸಕ್ತರು ಮದ್ಯಪಾನ ಮಾಡಿ ಗಲಭೆ ಮಾಡುವ ಸಾಧ್ಯತೆ ಇರುವ ಹಿನ್ನೆಲೆ, ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಠಿಯಿಂದ ಕರ್ನಾಟಕ ಅಬಕಾರಿ (ಭಾರತೀಯ ಮತ್ತು ವಿದೇಶೀಯ ಮದ್ಯ ಮಾರಾಟ) ನಿಯಮಗಳು 1968 ರ ನಿಯಮ 3ರಡಿ ನೀಡಿರುವ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಅಂಗಡಿಗಳನ್ನು ಕರ್ನಾಟಕ ಅಬಕಾರಿ ಕಾಯ್ದೆ 1965 ಕಲಂ 21 ರನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಲಾಗುತ್ತದೆ.

ಹಾಗೂ ಗಂಗೊಳ್ಳಿ ಪೊಲೀಸ್ ಠಾಣಾ ಸರಹದ್ದಿನ ಗಂಗೊಳ್ಳಿ ಹಾಗೂ ಗುಜ್ಜಾಡಿ ಗ್ರಾಮಗಳ ವ್ಯಾಪ್ತಿಯಲ್ಲಿ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಬಾರ್ & ರೆಸ್ಟೋರೆಂಟ್ ಮತ್ತು ವೈನ್‌ಶಾಪ್‌ಗಳ ಮದ್ಯಮಾರಾಟವನ್ನು ಫೆ. 5 ರ ಬೆಳಗ್ಗೆ 6 ಗಂಟೆಯಿಂದ ರಾತ್ರಿ 12 ರ ವರೆಗೆ ಅಬಕಾರಿ ಸನ್ನದುಗಳನ್ನು ಮುಚ್ಚಲು ಆದೇಶಿಸಿದ್ದಾರೆ.

 

LEAVE A REPLY

Please enter your comment!
Please enter your name here