Home ಸುದ್ದಿಗಳು ಮುಡಾ ಅಧ್ಯಕ್ಷ ಸ್ಥಾನಕ್ಕೆ ಮರಿಗೌಡ ರಾಜೀನಾಮೆ

ಮುಡಾ ಅಧ್ಯಕ್ಷ ಸ್ಥಾನಕ್ಕೆ ಮರಿಗೌಡ ರಾಜೀನಾಮೆ

Marigowda resigns as Muda president

ಬೆಂಗಳೂರು: ಮುಡಾ ನಿವೇಶನ ಹಂಚಿಕೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಡಾ ಅಧ್ಯಕ್ಷ ಸ್ಥಾನಕ್ಕೆ ಮರಿಗೌಡ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.

ರಾಜೀನಾಮೆಗೂ ಮುನ್ನ ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾಗಿ, ನಂತರ ವಿಕಾಸಸೌಧದಲ್ಲಿರುವ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ದೀಪ ಚೋಳನ್‌ಗೆ ರಾಜೀನಾಮೆ ಸಲ್ಲಿಸಿದ್ದಾರೆ.

ರಾಜೀನಾಮೆ ಬಳಿಕ ಮಾತನಾಡಿದ ಮರೀಗೌಡ, ಸಿಎಂ ಅವರು ರಾಜೀನಾಮೆ ನೀಡಲು ಸೂಚನೆ ಕೊಟ್ಟಿದ್ರು ಅದಕ್ಕೆ ರಾಜೀನಾಮೆ ಕೊಟ್ಟಿದ್ದೇನೆ. ನನ್ನ ಆರೋಗ್ಯವು ಸರಿಯಿಲ್ಲ. ಎರಡು ಬಾರಿ ಸ್ಟ್ರೋಕ್ ಆಯ್ತು. ಹೀಗಾಗಿ ರಾಜೀನಾಮೆ ಕೊಟ್ಟಿದ್ದೇನೆ.

ಮುಡಾ ತನಿಖೆ ನಡೆಯುತ್ತಿದೆ. ನಡೆಯಲಿ. ಅಕ್ರಮ ಆಗಿದೆಯಾ ಇಲ್ಲ ಅಂತಾ ನಾನು ಹೇಳೊಲ್ಲ. ತನಿಖೆಯಿಂದ ಸತ್ಯ ಹೊರಬರುತ್ತೆ ಎಂದು ತಿಳಿಸಿದರು.

ಸಿದ್ದರಾಮಯ್ಯ ನಮ್ಮ ನಾಯಕರು. 40 ವರ್ಷಗಳಿಂದ ಜೊತೆಯಲ್ಲಿ ಇದ್ದೇನೆ. ತಾಲೂಕು, ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾಗಿ ನನ್ನನ್ನು ಮಾಡಿದ್ದರು. ಯಾವತ್ತು ಕೂಡಾ ಸಿದ್ದರಾಮಯ್ಯ ಅವರು ಅಕ್ರಮ ಮಾಡಿ ಅಂತಾ ಹೇಳಿಲ್ಲ. ಮುಡಾ ವಿಚಾರದಲ್ಲೂ ಸಿಎಂ ಒತ್ತಡ ಹಾಕಿಲ್ಲ ಎಂದು ಸ್ಪಷ್ಟಪಡಿಸಿದರು.

 
Previous articleಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿಯಾಗಿ ಒಮರ್ ಅಬ್ದುಲ್ಲಾ ಪ್ರಮಾಣ ವಚನ ಸ್ವೀಕಾರ
Next articleಅ.22ರಂದು ಉಡುಪಿ ಪತ್ರಕರ್ತರ ಸಂಘದ ವಾರ್ಷಿಕ ಕ್ರೀಡಾಕೂಟ