Home ಸುದ್ದಿಗಳು ಗೀತಾಂಜಲಿ ಸಿಲ್ಕ್ಸ್ ನಲ್ಲಿ ಪುರುಷರ ಪ್ರತ್ಯೇಕ ಬಟ್ಟೆ ಮಳಿಗೆ ವಿಭಾಗ ಉದ್ಘಾಟನೆ

ಗೀತಾಂಜಲಿ ಸಿಲ್ಕ್ಸ್ ನಲ್ಲಿ ಪುರುಷರ ಪ್ರತ್ಯೇಕ ಬಟ್ಟೆ ಮಳಿಗೆ ವಿಭಾಗ ಉದ್ಘಾಟನೆ

0
ಗೀತಾಂಜಲಿ ಸಿಲ್ಕ್ಸ್ ನಲ್ಲಿ ಪುರುಷರ ಪ್ರತ್ಯೇಕ ಬಟ್ಟೆ ಮಳಿಗೆ ವಿಭಾಗ ಉದ್ಘಾಟನೆ

ಉಡುಪಿ: ಕಳೆದ ನಾಲ್ಕು ದಶಕಗಳಿಂದ ಜವಳಿ ವ್ಯವಹಾರದಲ್ಲಿ ಮನೆಮಾತಾಗಿರುವ ಆರ್‌ಕೆ ಸಹೋದರು ಇದೀಗ ನಗರದ ಗೀತಾಂಜಲಿ ಶಾಪರ್ ಸಿಟಿಯಲ್ಲಿರುವ ತಮ್ಮ ಗೀತಾಂಜಲಿ ಸಿಲ್ಕ್ಸ್ ನಲ್ಲಿ ನೂತನವಾಗಿ ಆರಂಭಿಸಿರುವ ಪುರುಷರ ಪ್ರತ್ಯೇಕ ವಿಭಾಗವನ್ನು ಬುಧವಾರ ಗ್ರಾಹಕರಿಂದಲೇ ಉದ್ಘಾಟಿಸಲಾಯಿತು.

ಈ ಸಂದರ್ಭ ಉದ್ಯಮಿ ಡಾ.ಜಿ ಶಂಕರ್ ಮಾತನಾಡಿ, ಸಣ್ಣ ಅಂಗಡಿಯ ಮೂಲಕ ಸತತ ಪರಿಶ್ರಮ, ಶ್ರದ್ದೆಯಿಂದ ದುಡಿಯುತ್ತಾ, ಪ್ರಸ್ತುತ ಜಿಲ್ಲೆಯಲ್ಲಿಯೇ ಬೃಹತ್ ವಸ್ತ್ರ ವೈವಿಧ್ಯಗಳ ಮಳಿಗೆಯನ್ನು ತೆರೆಯುವ ಸಾಧನೆ ಮಾಡಿದ್ದಾರೆ. ಗ್ರಾಹಕರಿಗೆ ಉತ್ತಮ ಸೇವೆ, ಗುಣಮಟ್ಟದ ವಸ್ತ್ರ ವಿನ್ಯಾಸಗಳನ್ನು ನೀಡಿದಾಗ ವ್ಯಾಪಾರ ಇನ್ನಷ್ಟು ಅಭಿವೃದ್ಧಿ ಹೊಂದುತ್ತದೆ ಎಂದರು.

Inauguration of separate men's clothing department at Gitanjali Silks

ಮಾಂಡೋವಿ ಬಿಲ್ಡರ್ಸ್ ನ ಡಾ. ಜೆರ್ರಿ ವಿನ್ಸೆಂಟ್ ಡಯಾಸ್ ಮಾತನಾಡಿ, ನಾಲ್ಕು ದಶಕಗಳ ಹಿಂದೆ ಗುಣಮಟ್ಟದ ವಸ್ತ್ರಗಳ ಖರೀದಿಗೆ ದೂರದ ಪಟ್ಟಣಗಳಿಗೆ ತೆರಳಬೇಕಿತ್ತು. ಆದರೆ ಪ್ರಸ್ತುತ, ಗೀತಾಂಜಲಿ ಸಿಲ್ಕ್ಸ್ ನಲ್ಲಿ ಉಡುಗೆ ತೊಡುಗೆಗಳು ಲಭ್ಯವಿದೆ ಎಂದರು‌.

ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಪ್ರಮುಖರಾದ ಡಾ. ರವಿರಾಜ್ ಆಚಾರ್ಯ, ಶ್ರೀಶಾ ನಾಯಕ್ ಪೆರ್ಣಂಕಿಲ, ಅಂಡಾರು ದೇವಿ ಪ್ರಸಾದ್ ಶೆಟ್ಟಿ, ಮಹಮ್ಮದ್ ಮೌಲಾ, ಹಫೀಝ್ ರೆಹಮಾನ್, ನಾರಾಯಣ ಸರಳಾಯ ಶುಭ ಹಾರೈಸಿದರು.

Inauguration of separate men's clothing department at Gitanjali Silks

ಗ್ರಾಹಕ ಪ್ರಮುಖರಾದ ಪುರುಷೋತ್ತಮ್ ಶೆಟ್ಟಿ, ಶಕುಂತಲಾ ಮಣಿಪಾಲ, ಧನರಾಜ್, ಅಮಿತಾ ವಾಸು ರಾಜಸ್ಥಾನ, ಮಾಲತಿ ತೀರ್ಥಹಳ್ಳಿ, ಕಿಶನ್ ಪ್ರಭು ಪಳ್ಳಿ, ಪ್ರದೀಪ್ ನಾಯಕ್ ನೀರೆ, ಪ್ರಶಾಂತ್ ಅಂಬಲಪಾಡಿ, ಇಬ್ರಾಹಿಂ ಉಚ್ಚಿಲ, ನಾರಾಯಣ ಶೆಣೈ, ಕೃಷ್ಣಮೂರ್ತಿ, ಸತ್ಯಾನಂದ ನಾಯಕ್, ಉಪೇಂದ್ರ ಶೆಣೈ ಮಣಿಪಾಲ, ರಘುರಾಮ ಪ್ರಭು ಎಣ್ಣೆಹೊಳೆ, ಜಯರಾಂ ಕಾರ್ಕಳ, ಪ್ರಕಾಶ್ ಪ್ರಭು, ರತ್ನಾಕರ ಪೆರ್ಡೂರು, ಆಸಿಫ್, ನಿತ್ಯಾನಂದ ನಾಯಕ್, ಸಂಸ್ಥೆಯ ಪಾಲುದಾರರಾದ ಲಕ್ಷ್ಮಣ ನಾಯಕ್, ರಮೇಶ್ ನಾಯಕ್, ಹರೀಶ್ ನಾಯಕ್ ಕುಟುಂಬಸ್ಥರು, ಸಿಬ್ಬಂದಿ, ಹಿತೈಷಿಗಳು, ಗ್ರಾಹಕರು ಸೇರಿದಂತೆ ಮೊದಲಾದ ಗಣ್ಯರು ಉಪಸ್ಥಿತರಿದ್ದರು.

ಪಾಲುದಾರ ಸಂತೋಷ್ ವಾಗ್ಲೆ ಸ್ವಾಗತಿಸಿ, ರಾಮಕೃಷ್ ನಾಯಕ್ ವಂದಿಸಿದರು. ನಿಖಿತಾ ಎರ್ಲಾಪಾಡಿ ನಿರೂಪಿಸಿದರು.

Inauguration of separate men's clothing department at Gitanjali Silks

ಕರಾವಳಿ ಕರ್ನಾಟಕದ ವಿಶಾಲ ಮಳಿಗೆ: ಕರಾವಳಿ ಕರ್ನಾಟಕದ ಅತೀ ವಿಶಾಲವಾದ ಗೀತಾಂಜಲಿ ಸಿಲ್ಕ್ಸ್ ಮಳಿಗೆಯಲ್ಲಿ ಈಗಾಗಲೇ ಮಹಿಳೆಯರ ಮತ್ತು ಮಕ್ಕಳ ಬಟ್ಟೆಗಳ ಪ್ರತ್ಯೇಕ ಮಹಡಿಗಳನ್ನು ಹೊಂದಿದ್ದು, ಇದೀಗ ಒಂದನೇ ಮಹಡಿಯಲ್ಲಿ ಪುರುಷರ ಸ್ವದೇಶಿ ಮತ್ತು ವಿದೇಶದ 22ಕ್ಕೂ ಅಧಿಕ ಬ್ರ್ಯಾಂಡ್‌ಗಳ ಮಳಿಗೆ ಶುಭಾರಂಭಗೊಂಡಿತು.

ಈ ಮಹಡಿಯಲ್ಲಿ ಮದುವೆ ಇತ್ಯಾದಿ ಧಾರ್ಮಿಕ ಸಮಾರಂಭಗಳಿಗೆ ಅಗತ್ಯವಿರುವ ಪಾರಂಪರಿಕ ಮತ್ತು ಆಧುನಿಕ ಶೈಲಿಯ ಬಟ್ಟೆಗಳು, ಆಫೀಸ್ ವೇರ್, ಡೈಲಿ ವೇರ್, ಕ್ಯಾಶುವಲ್ ವೇರ್, ಪಾರ್ಟಿ ವೇರ್ ಇತ್ಯಾದಿಗಳ ವಿಫುಲ ಸಂಗ್ರಹವನ್ನಡಲಾಗಿದೆ. ಅಲ್ಲದೇ ಗ್ರಾಹಕರ ಅಭಿರುಚಿಗೆ ಅನುಗುಣವಾಗಿ ಸೂಟಿಂಗ್ಸ್ – ಶರ್ಟಿಂಗ್ಸ್ ಜೊತೆಗೆ ಒಳಉಡುಪುಗಳು ಲಭ್ಯವಿದೆ.

Inauguration of separate men's clothing department at Gitanjali Silks

ಸುಮಾರು 15 ಸಾವಿರ ಚದರಡಿ ವಿಸ್ತೀರ್ಣದ ಈ ಮಹಡಿಯಲ್ಲಿ ದೇಶಿ ಮತ್ತು ವಿದೇಶಿ ಬ್ರ್ಯಾಂಡ್ ಗಳ ಪ್ರತ್ಯೇಕ ವಿಭಾಗಗಳಿವೆ. ಅಲ್ಲದೇ ಪೀಟರ್‌ ಇಂಗ್ಲೆಡ್, ಲಿನನ್ ಕ್ಲಬ್, ಕಿಲ್ಲರ್, ಫ್ಲೈಯಿಂಗ್ ಮೇಶಿನ್, ಅಲನ್ ಸೂಲಿ, ವ್ಯಾನ್ ಹುಸೇನ್, ಲೂಯಿಸ್ ಪಿಲಿಪ್, ಜಾನ್ ಪ್ಲೇಯರ್, ಲೆವಿಸ್ ಇತ್ಯಾದಿ ಬ್ರ್ಯಾಂಡ್ ಗಳ ಫಾರ್ಮಲ್, ಜೀನ್ಸ್ ಬಟ್ಟೆಗಳು ಲಭ್ಯ ಇವೆ.

 

LEAVE A REPLY

Please enter your comment!
Please enter your name here