Home ಸುದ್ದಿಗಳು ಶೀಘ್ರದಲ್ಲೇ ಮೆಟ್ರೋ ಪ್ರಯಾಣ ದರ ಏರಿಕೆ ಸಾಧ್ಯತೆ

ಶೀಘ್ರದಲ್ಲೇ ಮೆಟ್ರೋ ಪ್ರಯಾಣ ದರ ಏರಿಕೆ ಸಾಧ್ಯತೆ

0
ಶೀಘ್ರದಲ್ಲೇ ಮೆಟ್ರೋ ಪ್ರಯಾಣ ದರ ಏರಿಕೆ ಸಾಧ್ಯತೆ

ಬೆಂಗಳೂರು: ಮೆಟ್ರೋ ಪ್ರಯಾಣಿಕರಿಗೊಂದು ಶಾಕಿಂಗ್ ನ್ಯೂಸ್ ಸಿಗಲಿದೆ. ಶೀಘ್ರದಲ್ಲೇ ಮೆಟ್ರೋ ಪ್ರಯಾಣ ದರ ಏರಿಕೆಯಾಗುವ ಸಾಧ್ಯತೆಯಿದೆ.

ಇದಕ್ಕೂ ಮುಂಚೆ ಹಲವಾರು ಬಾರಿ ಮೆಟ್ರೋ ದರ ಏರಿಕೆ ಬಗ್ಗೆ ಬಿಎಂಆರ್‌ಸಿಎಲ್ ಪ್ರಸ್ತಾಪಿಸಿತ್ತು. ಆದರೆ ದರ ಏರಿಕೆ ಮಾಡಿರಲಿಲ್ಲ.ಆದರೆ ಈ ಬಾರಿ ದರ ಏರಿಕೆ ಮಾಡಲು ಮುಂದಾಗಿದೆ.

ಟಿಕೆಟ್ ದರ ಏರಿಕೆಗೆ ಈಗಾಗಲೇ ಮೆಟ್ರೋ ದರ ನಿಗದಿ ಸಮಿತಿಯನ್ನು ರಚಿಸಿದ್ದು 15% ರಿಂದ 20% ರಷ್ಟು ಟಿಕೆಟ್ ದರ ಏರಿಕೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಈ ವಿಚಾರವಾಗಿ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ  ಬುಧವಾರ ಸಾರ್ವಜನಿಕ ಪ್ರಕಟಣೆ ಹೊರಡಿಸಿದ್ದು, ‘ಮೆಟ್ರೊ ರೈಲು ದರ ನಿಗದಿ ಸಮಿತಿ’ಗೆ ಅಕ್ಟೋಬರ್ 21 ರೊಳಗೆ ಸಲಹೆಗಳನ್ನು ನೀಡುವಂತೆ ನಾಗರಿಕರನ್ನು ಕೋರಿದೆ.

ನಾಗರಿಕರು ತಮ್ಮ ಸಲಹೆಗಳನ್ನು [email protected] ಗೆ ಇಮೇಲ್ ಮಾಡಬಹುದು. ಅಥವಾ 3ನೇ ಮಹಡಿ, ‘ಸಿ’ ಬ್ಲಾಕ್, ಬಿಎಂಟಿಸಿ ಕಾಂಪ್ಲೆಕ್ಸ್, ಕೆಹೆಚ್​​ ರಸ್ತೆ, ಶಾಂತಿನಗರ, ಬೆಂಗಳೂರು-560027 ಈ ವಿಳಾಸಕ್ಕೆ ಪತ್ರ ಬರೆದು ‘ಮೆಟ್ರೊ ರೈಲು ದರ ನಿಗದಿ ಸಮಿತಿ’ ಅಧ್ಯಕ್ಷರಿಗೆ ಅಭಿಪ್ರಾಯ ತಿಳಿಸಬಹುದು ಎಂದು ಬಿಎಂಆರ್​​ಸಿಎಲ್ ತಿಳಿಸಿದೆ.

 

LEAVE A REPLY

Please enter your comment!
Please enter your name here