Home ಸುದ್ದಿಗಳು ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ: ಆರೋಪಿಗೆ 20 ವರ್ಷಗಳ ಜೈಲು ಶಿಕ್ಷೆ

ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ: ಆರೋಪಿಗೆ 20 ವರ್ಷಗಳ ಜೈಲು ಶಿಕ್ಷೆ

0
ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ: ಆರೋಪಿಗೆ 20 ವರ್ಷಗಳ ಜೈಲು ಶಿಕ್ಷೆ

ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಅದನ್ನು ವೀಡಿಯೋ ಚಿತ್ರೀಕರಣ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಡಿದ್ದ ಆರೋಪಿಗೆ 20 ವರ್ಷಗಳ ಜೈಲು ಶಿಕ್ಷೆ ಹಾಗೂ 1 ಲಕ್ಷ ರೂ. ದಂಡ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ.

ಆರೋಪಿಯನ್ನು ಹೆಬ್ರಿ ಮುದ್ರಾಡಿಯ ಅಶ್ವತ್ಥ್ (22) ಎಂದು ಗುರುತಿಸಲಾಗಿದೆ.

ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಎಫ್ಟಿಎಸ್‌ಸಿ-2 ಪೋಕ್ಸೋ ವಿಶೇಷ ನ್ಯಾಯಾಲಯದ ಜಿಲ್ಲಾ ನ್ಯಾಯಾಧೀಶ ಮಾನು ಕೆ.ಎಸ್‌. ಅವರು ತೀರ್ಪು ನೀಡಿದ್ದಾರೆ.

ಇನ್‌ಸ್ಟಾಗ್ರಾಂ ಮೂಲಕ ಬಾಲಕಿಯ ಸ್ನೇಹ ಬೆಳೆಸಿದ ಅಶ್ವತ್ಥ್ ಆಕೆಯನ್ನು ಭೇಟಿಯಾಗುವಂತೆ ಪುಸಲಾಯಿಸಿ 2023ರ ಮಾರ್ಚ್‌ನಲ್ಲಿ ಮೂಲ್ಕಿ ಬಸ್‌ ನಿಲ್ದಾಣದಿಂದ ಒತ್ತಾಯಪೂರ್ವಕವಾಗಿ ಬೈಕ್‌ನಲ್ಲಿ ಮಣಿಪಾಲದ ಲಾಡ್ಜ್ ಗೆ ಕರೆದುಕೊಡು ಹೋಗಿ ಅಲ್ಲಿ ಅತ್ಯಾಚಾರವೆಸಗಿದ್ದ.

ಈ ಕೃತ್ಯವನ್ನು ಮೊಬೈಲ್‌ನಲ್ಲಿ ವೀಡಿಯೋ ಚಿತ್ರೀಕರಣ ಮಾಡಿ ಸಾಮಾಜಿಕ ಜಾಲತಾಣಗಳ ಮೂಲಕ ಇತರರಿಗೆ ರವಾನಿಸಿದ್ದ. ಆ ವೀಡಿಯೋ ಬಾಲಕಿಯ ತಂದೆಗೂ ಬಂದಿತ್ತು. ಅದರಂತೆ ತಂದೆ ಮೂಲ್ಕಿ ಠಾಣೆಗೆ ದೂರು ನೀಡಿದ್ದರು.

ವಾದ ಪ್ರತಿವಾದವನ್ನು ಆಲಿಸಿದ ನ್ಯಾಯಾಧೀಶರು ಆರೋಪಿಯ ವಿರುದ್ಧದ ಅಪರಾಧ ಸಾಬೀತಾಗಿದೆ ಎಂದು ತೀರ್ಮಾನಿಸಿ, ನೊಂದ ಬಾಲಕಿಗೆ ಹೆಚ್ಚುವರಿಯಾಗಿ 4 ಲ.ರೂ. ಪರಿಹಾರವನ್ನು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ನೀಡು ವಂತೆಯೂ ತೀರ್ಪಿನಲ್ಲಿ ತಿಳಿಸಿದ್ದಾರೆ.

 

LEAVE A REPLY

Please enter your comment!
Please enter your name here