
ಕುಂದಾಪುರ: ಮೀನುಗಾರಿಕೆ ಕ್ಷೇತ್ರ ವನ್ನು ಅಭಿವೃದ್ಧಿಪಡಿಸಲು ಸುಸ್ಥಿರ ಮೀನುಗಾರಿಕೆ ಅಭಿವೃದ್ಧಿ, ಉತ್ಪಾದಕತೆ ಹಾಗೂ ಮೂಲಸೌಕರ್ಯ ಸುಧಾರಣೆಯೊಂದಿಗೆ ಆದಾಯ ದ್ವಿಗುಣ ಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಮೀನುಗಾರಿಕೆ, ಪಶು ವೈದ್ಯಕೀಯ ಮತ್ತು ಹೈನುಗಾರಿಕೆ ಸಚಿವರಿಗೆ ಸಂಸತ್ತಿನಲ್ಲಿ ಸಂಸದ ಬಿ.ವೈ. ರಾಘವೇಂದ್ರ ಮನವಿ ಮಾಡಿದ್ದಾರೆ.
ಉಡುಪಿ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆ (ಪಿಎಂಎಂಎಸ್‌ವೈ) ಯನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಗೊಳಿಸಬೇಕು ಎಂದು ಮನವಿ ಮಾಡಿದ್ದರು.
ಇದಕ್ಕೆ ಉತ್ತರಿಸಿದ ಸಚಿವರು, ಮೀನು ಕೃಷಿಕೊಳ, ಸುಧಾರಿತ ಮೀನು ಉತ್ಪಾದನೆ ಘಟಕ ಶೀತಲೀಕರಣ, ಮಂಜುಗಡ್ಡೆ ಕಾರ್ಖಾನೆನಿರ್ಮಾಣ, ಮಂಜುಗಡ್ಡೆ ಘಟಕಗಳ ಆಧುನೀ ಕರಣ,ಮೃದ್ವಂಗಿಗಳ/ಕಪ್ಪೆ ಚಿಪ್ಪು ಸಾಕಾಣಿಕೆಗಾಗಿ ಸಹಾಯ, ಮೀನು ಮಾರಾಟ ಮತ್ತು ಸಾಗಣೆಗೆ ತ್ರಿಚಕ್ರ ಹಾಗೂ ಇನ್ಸುಲೇಟೆಡ್ ವಾಹನಗಳ ಖರೀದಿಗಾಗಿ ಸಹಾಯಧನ-ವಿವಿಧ ಯೋಜನೆಗಳಿಗಾಗಿ ಇದುವರೆಗೆ ಜಿಲ್ಲೆಯಲ್ಲಿ 28,616 ಮಂದಿ ಸಹಾಯ ಧನ ಪಡೆದಿದ್ದಾರೆ.
ರಾಜ್ಯಕ್ಕೆ 2020- 21ರಿಂದ 2024-25ನೇ ಸಾಲಿನ ವರೆಗೆ ಒಟ್ಟು 1,056.34 ಕೋರೂ. ಅನುದಾನ ಒದಗಿಸಲಾಗಿದೆ. ಉಡುಪಿ ಜಿಲ್ಲೆಯಲ್ಲಿ ಈ ಯೋಜನೆಯಡಿ ಈವರೆಗೆ 17.43 ಕೋ.ರೂ. ಸಹಾಯಧನ ವಿನಿಯೋಗಿಸಲಾಗಿದೆ ಎಂದರು.
