
ಬೆಂಗಳೂರು: ಸಿಎಂ ಪತ್ನಿ ಮುಡಾ ಸೈಟ್ ವಾಪಸ್ ನೀಡಿರುವ ವಿಚಾರವಾಗಿ ಗೃಹ ಸಚಿವ ಜಿ ಪರಮೇಶ್ವರ್ ಮಾತನಾಡಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಪತ್ನಿ ಮುಡಾ ಸೈಟ್ ವಾಪಾಸ್ ನೀಡಿರುವುದು ಒಳ್ಳೆಯ ನಿರ್ಧಾರ. ಸ್ವಾಭಾವಿಕವಾಗಿ ಮನೆಯಲ್ಲಿ ಯಜಮಾನರಿಗೆ ತೊಂದರೆ ಆಗುತ್ತಿದೆ ಅಥವಾ ತೇಜೋವಧೆ ಆಗುತ್ತಿದೆ ಎನ್ನವುದು ಅವರಿಗೆ ಗೊತ್ತಾಗಿ ವಾಪಸ್ ಮಾಡುತ್ತೇನೆ ಎಂದಿದ್ದಾರೆ ಎಂದರು.
ತನಿಖೆ ಇರಲಿ ಆಪಾದನೆ ಬಂದ ತಕ್ಷಣ ಇದು ಸತ್ಯ ಆಗುವುದಿಲ್ಲ. ಆದರೆ ಇಷ್ಟು ದಿನ ರಾಜಕೀಯಕ್ಕೆ ಉಪಯೋಗಿಸುತ್ತಿದ್ದಾರೆ ಎನ್ನುವುದು ಅವರ ಅಭಿಪ್ರಾಯ ಅಷ್ಟೇ ಎಂದರು.
ನನಗೆ ಮರ್ಯಾದೆ ಮುಖ್ಯ ಅನ್ನುವುದು ಅವರ ಭಾವನೆಯಾಗಿದೆ. ಹಾಗಾಗಿಯೇ ಮುಡಾ ಸೈಟುಗಳನ್ನು ವಾಪಸ್ ನೀಡಿದ್ದಾರೆ. ಆದರೆ ಮುಡಾ ವಿಚಾರ ಬಿಜೆಪಿಯವರಿಗೆ ರಾಜಕೀಯಕ್ಕೆ ಉಪಯೋಗ ಆಗುತ್ತಿದೆ ಎನ್ನುವುದು ಖಾತ್ರಿಯಾಗಿದೆ ಎಂದು ತಿಳಿಸಿದ್ದಾರೆ.
