Home ಸುದ್ದಿಗಳು ಅತ್ಯಾಚಾರ ಪ್ರಕರಣ: ಶಾಸಕ ಮುನಿರತ್ನಗೆ 14 ದಿನಗಳ ನ್ಯಾಯಾಂಗ ಬಂಧನ

ಅತ್ಯಾಚಾರ ಪ್ರಕರಣ: ಶಾಸಕ ಮುನಿರತ್ನಗೆ 14 ದಿನಗಳ ನ್ಯಾಯಾಂಗ ಬಂಧನ

MLA Muniratna again ordered to judicial custody for 14 days

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಜೈಲು ಸೇರಿರುವ ಬಿಜೆಪಿ ಶಾಸಕ ಮುನಿರತ್ನಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಇಂದು ಆದೇಶ ನೀಡಿದೆ.

ಮುನಿರತ್ನನ್ನು ಪೊಲೀಸರು ಶನಿವಾರ ಕೋರ್ಟ್​ಗೆ ಹಾಜರುಪಡಿಸಿದ್ದು, ಅಕ್ಟೋಬರ್ 5ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ನೀಡಿದೆ.

ವಿಚಾರಣೆ ವೇಳೆ ನ್ಯಾಯಾಧೀಶರ ಬಳಿ ಮುನಿರತ್ನ ಅಳಲು ತೋಡಿಕೊಂಡಿದ್ದಾರೆ. ನನ್ನನ್ನು ಜೈಲಲ್ಲಿ ಇರಿಸಲು ವ್ಯವಸ್ಥಿತವಾದ ಸಂಚು ಹೂಡಲಾಗಿದೆ. ಲೋಕಸಭಾ ಚುನಾವಣೆ ಬಳಿಕ ಇದೆಲ್ಲ ಶುರುವಾಗಿದೆ. ಐದು ವರ್ಷಗಳ ಬಳಿಕ ಅತ್ಯಾಚಾರ ದೂರು ಕೊಡಿಸಿದ್ದಾರೆ. ಆಕೆ ಮೊದಲೇ ಕೊಡಬಹುದಿತ್ತಲ್ಲವೇ? ನನ್ನನ್ನು ಪೂರ್ತಿ ಐದು ವರ್ಷ ಜೈಲಲ್ಲಿ ಇಡಲು ಪ್ಲಾನ್ ಮಾಡಿಸಿದ್ದಾರೆ.

ನಾನು ಜನಪ್ರತಿನಿಧಿಯಾದವನು, ನನಗೆ ಜನರ ಬಳಿ ಹೇಗೆ ನಡೆದುಕೊಳ್ಳಬೇಕು ಎಂದು ಗೊತ್ತಿದೆ. ನಾನು ಈ ನ್ಯಾಯಾಲಯದಲ್ಲೆ ಬೇಕಾದರೆ ರಾಜೀನಾಮೆ ಕೊಡುತ್ತೇನೆ. ಆದರೆ ಈ ತರ ಹಿಂಸೆ ತಡೆದುಕೊಳ್ಳಲು ಆಗಲ್ಲ ಎಂದು ಮುನಿರತ್ನ ಅಲವತ್ತುಕೊಂಡರು.

ಬೆದರಿಕೆ ಹಾಕಿದ ಮತ್ತು ಜಾತಿ ನಿಂದನೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೊಳಗಾಗಿ ಜೈಲು ಪಾಲಾಗಿದ್ದ ಅವರು ಗುರುವಾರವಷ್ಟೇ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಮತ್ತೆ ಅತ್ಯಾಚಾರ ಪ್ರಕರಣದಲ್ಲಿ ಜೈಲು ಪಾಲಾಗಿದ್ದಾರೆ.

 
Previous articleರಾಜ್ಯದ ಎಲ್ಲ ಮುಜರಾಯಿ ದೇಗುಲಗಳ ಪ್ರಸಾದ ಪರೀಕ್ಷೆಗೆ ಸೂಚನೆ
Next articleಯೂನಿಯನ್ ನ ಸ್ವಂತ ಕಟ್ಟಡ ನಿರ್ಮಾಣಕ್ಕೆ ಯೋಜನೆ: ಜಯಕರ ಶೆಟ್ಟಿ ಇಂದ್ರಾಳಿ