
ನವದೆಹಲಿ: ಒಡಿಶಾದ ಬಾಲಸೋರ್ ನಲ್ಲಿ ನಡೆದ ಭೀಕರ ರೈಲು ದುರಂತ ಸಂಭವಿಸಿದ 51 ಗಂಟೆಗಳ ಬಳಿಕ ರೈಲು ಸಂಚಾರವನ್ನು ಪುನರಾರಂಭಿಸಲಾಗಿದ್ದು, ಸುರಕ್ಷಿತ ಪ್ರಯಾಣಕ್ಕಾಗಿ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಪ್ರಾಥಿಸಿದ್ದಾರೆ.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರ ಸೂಚನೆಯಂತೆ ರೈಲ್ವೆ ಹಳಿಗಳ ಪುನಶ್ಚೇತನ ಕೆಲಸದಲ್ಲಿ ನಮ್ಮ ತಂಡ ತೊಡಗಿಕೊಂಡಿದೆ. ಎರಡೂ ಹಳಿಗಳ ಸೇವೆಗಳನ್ನು ಪುನರಾರಂಭಿಸಲಾಗಿದೆ ಎಂದರು.ಹಿನ್ನೆಲೆ: ಶುಕ್ರವಾರ ಸಂಭವಿಸಿದ ಬೆಂಗಳೂರು-ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್, ಶಾಲಿಮಾರ್-ಚೆನ್ನೈ ಸೆಂಟ್ರಲ್ ಕೋರಮಂಡಲ್ ಎಕ್ಸ್‌ಪ್ರೆಸ್ ಮತ್ತು ಗೂಡ್ಸ್ ರೈಲುಗಳ ನಡುವೆ ನಡೆದ ಭೀಕರ ಅಪಘಾತದಲ್ಲಿ ಕನಿಷ್ಠ 288ಕ್ಕೂ ಅಧಿಕ ಜನ ಸಾವನ್ನಪ್ಪಿದ್ದು, 900ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಎಲೆಕ್ಟ್ರಾನಿಕ್ ಇಂಟರ್ ಲಾಕಿಂಗ್ ಬದಲಾವಣೆಯೇ ಕಾರಣ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದರು.
