Home ಸರಕಾರಿ ಯೋಜನೆಗಳು ಕೇಂದ್ರ ಸರಕಾರ ಕೇಂದ್ರ ಸರ್ಕಾರದ ಈ ಯೋಜನೆಗಳ ಬಗ್ಗೆ ನೀವು ತಿಳಿಯಲೇಬೇಕು

ಕೇಂದ್ರ ಸರ್ಕಾರದ ಈ ಯೋಜನೆಗಳ ಬಗ್ಗೆ ನೀವು ತಿಳಿಯಲೇಬೇಕು

0
ಕೇಂದ್ರ ಸರ್ಕಾರದ ಈ ಯೋಜನೆಗಳ ಬಗ್ಗೆ ನೀವು ತಿಳಿಯಲೇಬೇಕು

ಇಂದು ಕೇಂದ್ರ ಸರ್ಕಾರವು ಜನ‌ಪರವಾದ ಯೋಜನೆಗಳನ್ನು ಮಾಡುತ್ತಲೇ ಬಂದಿದ್ದು ರೈತರಿಗೆ, ಮಹಿಳೆಯರಿಗೆ, ವಿಧ್ಯಾರ್ಥಿಗಳಿಗೆ ಹೀಗೆ ಹಲವು ರೀತಿಯ ಯೋಜನೆಗಳನ್ನು ಜಾರಿಗೆ ತರುತ್ತಲೆ ಇದೆ. ಶಿಕ್ಷಣ (Education), ಕೃಷಿ (Agriculture), ಆರೋಗ್ಯ (Health), ವಿಜ್ಞಾನ (Science) ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಅಭಿವೃದ್ದಿ ಮಾಡುತ್ತಿದೆ. ಅದರಲ್ಲಿ ಮುಖ್ಯವಾಗಿ ಕೆಲವು ಯೋಜನೆಗಳು ಜನರಿಗೆ ಬಹಳಷ್ಟು ಪೂರಕವಾಗಿದೆ. ಕೇಂದ್ರ ಸರ್ಕಾರದ ಕೆಲವು ಯೋಜನೆಗಳ ಮಾಹಿತಿ ಇಲ್ಲಿದೆ.

ಉಜ್ವಲ ಯೋಜನೆ

ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಉಜ್ವಲ ಯೋಜನೆ ಜಾರಿಗೆ ತಂದಿದ್ದು, ಇದರ ಮೂಲಕ ಉಚಿತ ಎಲ್‌ಪಿಜಿ ಸಂಪರ್ಕ ಯೋಜನೆಯು ಸಿಗಲಿದೆ. ಹೌದು, ಈ ಯೋಜನೆ ಹಲವು ಬಡ ಕುಟುಂಬಗಳಿಗೆ ಅಡುಗೆ ಅನಿಲ ಸಿಲಿಂಡರ್‌ಗಳನ್ನು ಒದಗಿಸಿದ್ದು. ಸಬ್ಸಿಡಿ ದರದಲ್ಲಿ ಗ್ಯಾಸ್ ಸಂಪರ್ಕಗಳನ್ನು ಕಲ್ಪಿಸಿಕೊಡುತ್ತದೆ.

ಕಿಸಾನ್ ಸಮ್ಮಾನ್ ನಿಧಿ
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN) ಯೋಜನೆಯು ರೈತ ಪರವಾದ ಯೋಜನೆ ಯಾಗಿದ್ದು, ಅರ್ಹ ರೈತರು ನೋಂದಣಿ ಮಾಡಿಕೊಳ್ಳಬಹುದಾಗಿದೆ. ಇದರ ಮೂಲಕ ರೈತರ ಕುಟುಂಬಗಳಿಗೆ ವರ್ಷಕ್ಕೆ 6,000 ರೂಪಾಯಿಗಳ ಆರ್ಥಿಕ ಪ್ರಯೋಜನವನ್ನು ನೀಡಲಾಗುತ್ತದೆ. 2,000 ರೂಪಾಯಿ ಕಂತುಗಳಲ್ಲಿ ಬಿಡುಗಡೆ ಮಾಡಿ ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆಯಾಗುತ್ತದೆ.

ಸ್ವಚ್ಛ ಭಾರತ್ ಅಭಿಯಾನ
ಸ್ವಚ್ಛ ಭಾರತ ಅಭಿಯಾನ, ಇದು ದೇಶದೆಲ್ಲೆಡೆ ಸ್ವಚ್ಚತೆಯನ್ನು ಪಸರಿಸುವ ಯೋಜನೆಯಾಗಿದ್ದು, ದೇಶಾದ್ಯಂತ ಬಯಲು ಶೌಚವನ್ನು ತೊಡೆದುಹಾಕುವ ಮುಖ್ಯ ಗುರಿ ಇದರದ್ದಾಗಿದೆ. ಇದು ಎಲ್ಲಾ ನಗರಗಳನ್ನು ಕಸ ಮುಕ್ತ ಪ್ರದೇಶ ಮಾಡಲು ಮತ್ತು ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳನ್ನು ಬಯಲು ಶೌಚ ಮುಕ್ತಗೊಳಿಸುವ ಗುರಿಯನ್ನು ಹೊಂದಿದೆ.

ಪ್ರಧಾನ ಮಂತ್ರಿ ಆವಾಸ್
ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಆವಾಸ್ ಯೋಜನೆಯು ಆರಂಭವಾಗಿದ್ದು, ಇದು ವಸತಿ ಕಲ್ಪಿಸುವ ಗುರಿಯನ್ನು ಹೊಂದಿದೆ. ಈ ಯೋಜನೆಯ ಮೂಲಕ ಬಡ ವರ್ಗದ ಜನತೆಗೆ ಮನೆ ಕಟ್ಟಲು ಸಾಧ್ಯವಾಗದ ಸಂದರ್ಭದಲ್ಲಿ ವಸತಿ ಯೋಜನೆಯ ಮೂಲಕ ಸಹಾಯಧನ ಒದಗಿಸುತ್ತದೆ.

ಒಟ್ಟಿನಲ್ಲಿ ಕೇಂದ್ರ ಸರ್ಕಾರದ ಹಲವು ಯೋಜನೆಗಳು ಬಡ ವರ್ಗದ ಜನತೆಗೆ ಸಹಾಯಕವಾಗಲಿದ್ದು, ಜನತೆ ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.

 

LEAVE A REPLY

Please enter your comment!
Please enter your name here