
ನವದೆಹಲಿ: ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ನಿಲ್ಲಿಸಲು ಭದ್ರತಾ ಪಡೆಗಳು ಕಾರ್ಯಾಚರಣೆ ಪ್ರಾರಂಭಿಸಿದ್ದು ಕೆಲವೇ ಗಂಟೆಗಳಲ್ಲಿ 40 ಬಂಡುಕೋರರನ್ನು ಹತ್ಯೆ ಮಾಡಿದ್ದಾರೆ. ಈ ಬಗ್ಗೆ ಅಲ್ಲಿನ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಭಾನುವಾರ ಮಾಹಿತಿ ನೀಡಿದ್ದಾರೆ. ಅಲ್ಲದೇ ಅಲ್ಲಿನ ಜಿಲ್ಲೆಗಳ ಪ್ರದೇಶಗಳಲ್ಲಿ ಹೊಸದಾಗಿ ಘರ್ಷಣೆಗಳು ಆರಂಭವಾಗಿವೆ.
ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಅವರು ಮುಖ್ಯಮಂತ್ರಿ ಬಿರೇನ್ ಸಿಂಗ್ಅವರನ್ನು ಭೇಟಿಯಾಗಿ ಮಣಿಪುರದ ಪ್ರಸ್ತುತ ಭದ್ರತಾ ಪರಿಸ್ಥಿತಿ ಮತ್ತು ಶಾಂತಿಯನ್ನು ಪುನಃಸ್ಥಾಪಿಸಲು ಸೇನೆಯು ಕೈಗೊಂಡ ಕ್ರಮಗಳ ಬಗ್ಗೆ ಚರ್ಚಿಸಿದ್ದಾರೆ.
ಭಾನುವಾರ ಮಣಿಪುರದಾದ್ಯಂತ 15ಕ್ಕೂ ಹೆಚ್ಚು ಸ್ಥಳಗಳಲ್ಲಿ ಸಶಸ್ತ್ರ ಗುಂಪುಗಳು ಮತ್ತು ಭದ್ರತಾ ಪಡೆಗಳ ನಡುವೆ ಘರ್ಷಣೆಗಳು ನಡೆದಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಾಗರಿಕರ ವಿರುದ್ಧ ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಬಳಸುತ್ತಿರುವ ಈ ಭಯೋತ್ಪಾದಕ ಗುಂಪುಗಳ ವಿರುದ್ಧ ಕಾರ್ಯಾಚರಣೆ ನಡೆಸಲಾಗಿದೆ. ವಿವಿಧ ಪ್ರದೇಶಗಳಲ್ಲಿ ಸುಮಾರು 40 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದ್ದು, ಇನ್ನೂ ಹಲವರನ್ನು ಬಂಧಿಸಲಾಗಿದೆ” ಎಂದು ಸಿಎಂ ತಿಳಿಸಿದ್ದಾರೆ.
