
ನವದೆಹಲಿ: ಆಧಾರ್ ಕಾರ್ಡ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡುವಂತೆ ಕೇಂದ್ರ ಸರ್ಕಾರ ಈಗಾಗಲೇ ಹಲವು ಬಾರಿ ಸೂಚನೆ ನೀಡಿತ್ತು. ಇದೀಗ ಆಧಾರ್-ಪಾನ್ ಲಿಂಕ್ ಗೆ ನಾಳೆ ಕೊನೆಯ ದಿನಾಂಕವಾಗಿದ್ದು, ನಾಳೆಯೊಳಗೆ ಲಿಂಕ್ ಮಾಡಬೇಕಾಗಿದೆ. ಇಲ್ಲವಾದಲ್ಲಿ ಪಾನ್ ಕಾರ್ಡ್ ಅಮಾನ್ಯವಾಗಲಿದೆ ಎಂದು ಹೇಳಲಾಗಿದೆ.
ಒಂದು ವೇಳೆ ಪಾನ್ ಕಾರ್ಡ್ ಅಮಾನ್ಯವಾದಲ್ಲಿ ಬ್ಯಾಂಕ್, ಆಥಿಕ ಚಟುವಟಿಕೆಗಳಿಗೆ ಸಮಸ್ಯೆ ಎದುರಾಗಲಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಪಾನ್ ಕಾರ್ಡ್ ಕಡ್ಡಾಯವಾಗಿರುವ ಹಿನ್ನೆಲೆ ಎಲ್ಲರೂ ನಾಳೆಯೊಳಗೆ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ.
