
ಕೋಲ್ಕತ್ತಾ: ಮಂಗಳವಾರ ಬೆಳಗ್ಗೆ ಬಂಗಾಳ ಕೊಲ್ಲಿಯಲ್ಲಿ 5.1 ತೀವ್ರತೆಯ ಭೂಕಂಪ (Earthquake) ಸಂಭವಿಸಿದ್ದು, ಕೋಲ್ಕತ್ತಾ ಮತ್ತು ಪಶ್ಚಿಮ ಬಂಗಾಳದ ಹಲವು ಭಾಗಗಳಲ್ಲಿ ಕಂಪನದ ಅನುಭವವಾಗಿದೆ. ಬೆಳಗ್ಗೆ 6:10ಕ್ಕೆ ಭೂಕಂಪ ಸಂಭವಿಸಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ (NCS) ವರದಿ ಮಾಡಿದೆ.
ಒಡಿಶಾದ ಪುರಿ ಬಳಿ ಭೂಕಂಪನ ದಾಖಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಅಧಿಕಾರಿಯೊಬ್ಬರು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ. ಬಂಗಾಳಕೊಲ್ಲಿಯಲ್ಲಿ 91 ಕಿ.ಮೀ ಆಳದಲ್ಲಿ ಭೂಕಂಪ ಸಂಭವಿಸಿದೆ ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ. ಕಂಪನವು 19.52 N ಅಕ್ಷಾಂಶ ಮತ್ತು 88.55 E ರೇಖಾಂಶದಲ್ಲಿ ದಾಖಲಾಗಿದೆ ಎಂದು ಅವರು ಹೇಳಿದರು.
ಕಂಪನಗಳು ಕೋಲ್ಕತ್ತಾದ ನಿವಾಸಿಗಳಲ್ಲಿ ಕ್ಷಣಿಕ ಭೀತಿಯನ್ನು ಉಂಟುಮಾಡಿದರೂ, ಯಾವುದೇ ಹಾನಿ ಅಥವಾ ಸಾವುನೋವುಗಳು ವರದಿಯಾಗಿಲ್ಲ.
