Home ಸುದ್ದಿಗಳು ರಾಷ್ಟ್ರೀಯ ಸಿಖ್ ವಿರೋಧಿ ದಂಗೆ: ಕಾಂಗ್ರೆಸ್ ಮಾಜಿ ಸಂಸದ ಸಜ್ಜನ್ ಕುಮಾರ್ ಗೆ ಜೀವಾವಧಿ ಶಿಕ್ಷೆ

ಸಿಖ್ ವಿರೋಧಿ ದಂಗೆ: ಕಾಂಗ್ರೆಸ್ ಮಾಜಿ ಸಂಸದ ಸಜ್ಜನ್ ಕುಮಾರ್ ಗೆ ಜೀವಾವಧಿ ಶಿಕ್ಷೆ

0
ಸಿಖ್ ವಿರೋಧಿ ದಂಗೆ: ಕಾಂಗ್ರೆಸ್ ಮಾಜಿ ಸಂಸದ ಸಜ್ಜನ್ ಕುಮಾರ್ ಗೆ ಜೀವಾವಧಿ ಶಿಕ್ಷೆ

ನವದೆಹಲಿ: 1984 ರ ಸಿಖ್ ವಿರೋಧಿ ದಂಗೆಗೆ ಸಂಬಂಧಿಸಿದ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಮಾಜಿ ಸಂಸದ ಸಜ್ಜನ್ ಕುಮಾರ್ ಗೆ ದೆಹಲಿ ನ್ಯಾಯಾಲಯ ಮಂಗಳವಾರದಂದು ಜೀವಾವಧಿ ಶಿಕ್ಷೆ ವಿಧಿಸಿದೆ.

ವಿಶೇಷ ನ್ಯಾಯಾಧೀಶೆ ಕಾವೇರಿ ಬವೇಜಾ ಅವರು 1984ರ ನವೆಂಬರ್ 1 ರಂದು ಜಸ್ವಂತ್ ಸಿಂಗ್ ಮತ್ತು ಅವರ ಪುತ್ರ ತರುಣ್‌ದೀಪ್ ಸಿಂಗ್ ಅವರನ್ನು ಹತ್ಯೆ ಪ್ರಕರಣದ ತೀರ್ಪು ಪ್ರಕಟಿಸಿದರು.

ಜಸ್ವಂತ್ ಸಿಂಗ್ ಪತ್ನಿ ಮತ್ತು ಪ್ರಾಸಿಕ್ಯೂಷನ್ ಸಜ್ಜನ್ ಕುಮಾರ್ ಗೆ ಮರಣದಂಡನೆ ವಿಧಿಸಬೇಕೆಂದು ನ್ಯಾಯಾಲಯವನ್ನು ಕೋರಿದ್ದರು.

ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಹತ್ಯೆಗೆ ಪ್ರತೀಕಾರ ತೀರಿಸಿಕೊಳ್ಳಲು ಮಾರಣಾಂತಿಕ ಆಯುಧಗಳೊಂದಿಗೆ ಶಸ್ತ್ರಸಜ್ಜಿತವಾದ ಬೃಹತ್ ಜನಸಮೂಹವು ಸಿಖ್ಖರ ನರಮೇಧ, ಲೂಟಿ, ಮನೆ ಮಠಗಳಿಗೆ ಬೆಂಕಿ ಇಟ್ಟು ಆಸ್ತಿ ನಾಶಕ್ಕೆ ಕಾರಣವಾಗಿತ್ತು ಎಂದು ಪ್ರಾಸಿಕ್ಯೂಷನ್ ಆರೋಪಿಸಿದೆ.

ಸಜ್ಜನ್ ಕುಮಾರ್ ನೇತೃತ್ವದ ಜನಸಮೂಹವು ದೆಹಲಿಯ ಸರಸ್ವತಿ ವಿಹಾರದ ನಿವಾಸಿ ಜಸ್ವಂತ್ ಸಿಂಗ್ ಮತ್ತು ಮಗ ತರುಣ್ ದೀಪ್ ಸಿಂಗ್ ಮನೆ ಮೇಲೆ ದಾಳಿ ನಡೆಸಿತ್ತು ಮತ್ತು ಅವರಿಬ್ಬರನ್ನು ಹತ್ಯೆ ಮಾಡಿತ್ತು.

ತೀರ್ಪಿನ ಬಳಿಕ ಪ್ರತಿಕ್ರಿಯೆ ನೀಡಿದ ಸಿಖ್ ನಾಯಕ ಗುರ್ಲಾದ್ ಸಿಂಗ್, “ನಾವು ಮರಣದಂಡನೆಗಿಂತ ಕಡಿಮೆಯದ್ದನ್ನು ಸ್ವೀಕರಿಸುವುದಿಲ್ಲ, ನ್ಯಾಯಾಲಯದ ತೀರ್ಪಿನಿಂದ ನಮಗೆ ಸಂತೋಷವಿಲ್ಲ. ನಾವು ಉನ್ನತ ನ್ಯಾಯಾಲಯಕ್ಕೆ ಹೋಗಿ ಸಜ್ಜನ್ ಕುಮಾರ್‌ಗೆ ಮರಣದಂಡನೆ ವಿಧಿಸಲು ಸರ್ಕಾರಕ್ಕೆ ಮನವಿ ಮಾಡುತ್ತೇವೆ” ಎಂದಿದ್ದಾರೆ.

 

 

LEAVE A REPLY

Please enter your comment!
Please enter your name here