ಬೆಂಗಳೂರು: ಮಂಗಳವಾರದಂದು ಗ್ರಾಮ್ಗೆ 70 ರೂನಷ್ಟು ಏರಿಕೆ ಆಗಿದ್ದ ಚಿನ್ನದ ಬೆಲೆ ಬುಧವಾರ 55 ರೂ. ದುಬಾರಿಯಾಗಿದೆ. ಒಟ್ಟಾರೆಯಾಗಿ, ಎರಡು ದಿನದಲ್ಲಿ ಬರೋಬ್ಬರಿ 125 ರೂ ಬೆಲೆ ಏರಿಕೆ ಆಗಿದೆ. ಇಂದು ಆಭರಣ ಚಿನ್ನದ ಬೆಲೆ 8,010 ರೂ ಇದ್ದದ್ದು 8,065 ರೂಗೆ ಹೆಚ್ಚಳಗೊಂಡಿದೆ. ಅಪರಂಜಿ ಚಿನ್ನದ ಬೆಲೆ ಮತ್ತೊಮ್ಮೆ 8,800 ರೂ ಗಡಿ ಸಮೀಪಕ್ಕೆ ಹೋಗಿದೆ. 18 ಕ್ಯಾರಟ್ ಚಿನ್ನದ ಬೆಲೆಯೂ 6,600 ರೂ ಸಮೀಪದಲ್ಲಿದೆ.
ಬೆಳ್ಳಿ ಬೆಲೆಯ ಸ್ಥಿರತೆ ಮುಂದುವರಿದಿದೆ. ಬೆಂಗಳೂರಿನಲ್ಲಿ ಬೆಳ್ಳಿ ಬೆಲೆ ಗ್ರಾಮ್ಗೆ 98 ರೂ ಇದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 80,650 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 87,980 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,800 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 80,650 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 9,800 ರುಪಾಯಿಯಲ್ಲಿ ಇದೆ.
ಬೆಂಗಳೂರಿನಲ್ಲಿ ಚಿನ್ನ- ಬೆಳ್ಳಿ ಬೆಲೆ
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 80,650 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 87,980 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 980 ರೂ
