ಚೆನ್ನೈ:ಭಾರತದಲ್ಲಿ ಐಸಿಸಿ ಪುರಷರ ಕ್ರಿಕೆಟ್ ವಿಶ್ವಕಪ್ 2023 ನ ರವಿವಾರದ ಹೈವೋಲ್ಟೇಜ್ ಪಂದ್ಯವು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಭಾರತ ತಂಡವು ಆಸ್ಟ್ರೇಲಿಯಾವನ್ನು ಎದುರಿಸಲಿದೆ. ರೋಹಿತ್ ಶರ್ಮಾ ನಾಯಕತ್ವದಲ್ಲಿ ನಡೆಯುವ ಇಂದಿನ ಪಂದ್ಯವು ಕ್ರಿಕೆಟ್ ಪ್ರಿಯರಿಗೆ ಭಾರೀ ಕುತೂಹಲವನ್ನುಂಟು ಮಾಡಿದೆ.
ಭಾರತ ತಂಡದಲ್ಲಿ ಆರಂಭದಲ್ಲಿ ರೋಹಿತ್ ಶರ್ಮಾ ಜೊತೆ ಇಶಾನ್ ಕಿಶನ್ ಆಡಲಿದ್ದಾರೆ. ಮೂರನೇ ಕ್ರಮಾಂಕದಲ್ಲಿ ವಿರಾಟ್ ಕೋಹ್ಲಿ, ನಾಲ್ಕನೇ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್ ಆಡಲಿದ್ದಾರೆ. ಕೆ.ಎಲ್ ರಾಹುಲ್ ವಿಕಟ್ ಕೀಪರ್ ಆಗಿ ಕಣಕ್ಕಿಳಿಯಲಿದ್ದು, ಆಲ್‌ರೌಂಡರ್‌ಗಳಾಗಿ ಹಾದ್ರಿಕ್ ಪಾಂಡ್ಯ ಮತ್ತು ರವೀಂದ್ರ ಜಡೇಜಾ ಇರಲಿದ್ದಾರೆ. ತಂಡದಲ್ಲಿ ರವಿಚಂದ್ರನ್ ಅಶ್ವಿನ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್ ಇರಲಿದ್ದಾರೆ.
ಆಸ್ಟ್ರೇಲಿಯಾ ತಂಡದ ನಾಯಕತ್ವವನ್ನು ಪ್ಯಾಟ್ ಕಮಿನ್ಸ್ ವಹಿಸಿಕೊಳ್ಳಲಿದ್ದು, ಡೇವಿಡ್ ವಾರ್ನರ್ ಹಾಗೂ ಸ್ಟೀವ್ ಸ್ಮಿತ್ ಬ್ಯಾಟಿಂಗ್ ವಿಭಾಗದಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ. ಆಲ್‌ರೌಂಡರ್ ಆಗಿ ಗ್ಲೆನ್ ಮ್ಯಾಕ್ಸ್‌ವೆಲ್ ಹಾಗೂ ಪ್ಯಾಟ್ ಕಮಿನ್ಸ್ ಆಡಲಿದ್ದಾರೆ. ತಂಡದಲ್ಲಿ ಅಲೆಕ್ಸ್ ಕ್ಯಾರಿ, ಜೋಶ್ ಹ್ಯಾಜಲ್ವುಡ್, ಸೀನ್ ಅಬಾಟ್, ಕ್ಯಾಮರಾನ್ ಗ್ರೀನ್, ಟ್ರಾವಿಸ್ ಹೆಡ್, ಮಾರ್ನಸ್ ಲ್ಯಾಬುಸ್‌ಚಾಗ್ನೆ, ಮಿಚ್ ಮಾರ್ಷ್, ಮಾರ್ಕಸ್ ಸ್ಟೋಯಿನಿಸ್, ಆಡಮ್ ಝಂಪಾ, ಮಿಚೆಲ್ ಸ್ಟಾರ್ಕ್ ಆಡಲಿದ್ದಾರೆ.
ಇನ್ನು, ಈ ಬಾರಿ ಒಟ್ಟು 10 ಸ್ಥಳಗಳಲ್ಲಿ 48 ಪಂದ್ಯಗಳು ನಡೆಯಲಿವೆ. 2023ರ ಐಸಿಸಿ ಕ್ರಿಕೆಟ್ ವಿಶ್ವಕಪ್ ಪಂದ್ಯಗಳು ನರೇಂದ್ರ ಮೋದಿ ಸ್ಟೇಡಿಯಂ ಅಹಮದಾಬಾದ್, ಚಿನ್ನಸ್ವಾಮಿ ಕ್ರೀಡಾಂಗಣ ಬೆಂಗಳೂರು, ಎಂ.ಎ.ಚಿದಂಬರಂ ಸ್ಟೇಡಿಯಂ ಚೆನ್ನೈ, ಅರುಣ್ ಜೇಟ್ಲಿ ಸ್ಟೇಡಿಯಂ ದೆಹಲಿ, ಹಿಮಾಚಲ ಪ್ರದೇಶ ಕ್ರಿಕೆಟ್ ಸಂಸ್ಥೆ ಕ್ರೀಡಾಂಗಣ ಧರ್ಮಶಾಲಾ, ಈಡನ್ ಗಾಡನ್ಸ್ ಕೋಲ್ಕತ್ತಾ, ಭಾರತ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಏಕನಾ ಕ್ರಿಕೆಟ್ ಸ್ಟೇಡಿಯಂ ಲಕ್ನೋ, ವಾಂಖೆಡೆ ಸ್ಟೇಡಿಯಂ ಮುಂಬೈ, ಎಂಸಿಎ ಅಂತರಾಷ್ಟ್ರೀಯ ಕ್ರೀಡಾಂಗಣ ಪುಣೆ, ರಾಜೀವ್ ಗಾಂಧಿ ಇಂಟರ್ ನ್ಯಾಟ್ ಸ್ಥಳಗಳಲ್ಲಿ ನಡೆಯಲಿವೆ. ಪಂದ್ಯವನ್ನು ಭಾರತದಲ್ಲಿ ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್ನಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ. ಎಲ್ಲಾ 48ಪಂದ್ಯಗಳನ್ನು ಡಿಸ್ನಿ ಪ್ಲಸ್ ಹಾಟ್ ಸ್ಟಾರ್ ಅಪ್ಲಿಕೇಶನ್ ಮತ್ತು ವೆಬ್‌ಸೈಟ್ ನಲ್ಲಿ ಲೈವ್ ಸ್ಟ್ರೀಮ್ ಮಾಡಲಾಗತ್ತದೆ.
