
ಅಮರಾವತಿ: ನಾಲ್ಕನೇ ಬಾರಿ ಆಂಧ್ರಪ್ರದೇಶದ ಸಿಎಂ ಆಗಿ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರು ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿ, ಹಿರಿಯ ಬಿಜೆಪಿ ಮುಖಂಡರು ಹಾಗೂ ಕೇಂದ್ರ ಸಚಿವರೂ ಸಾಕ್ಷಿಯಾದರು.
ಆಂಧ್ರಪ್ರದೇಶದ ರಾಜ್ಯಪಾಲ ಎಸ್ ಅಬ್ದುಲ್ ನಜೀರ್ ಅವರು ಚಂದ್ರ ಬಾಬು ನಾಯ್ಡು ಅವರಿಗೆ ಪ್ರಮಾಣ ವಚನ ಬೋಧಿಸಿದರು. ಅಧಿಕಾರ ಸ್ವೀಕರಸಿದ ಚಂದ್ರಬಾಬು ನಾಯ್ಡು ಅವರನ್ನು ತಬ್ಬಿಕೊಂಡ ಪ್ರಧಾನಿ ಮೋದಿ ಅವರು ಶುಭ ಹಾರೈಸಿದರು. ಕೇಂದ್ರ ಸಚಿವರಾದ ಅಮಿತ್ ಶಾ, ನಿತಿನ್ ಗಡ್ಕರಿ ಮತ್ತು ಜೆಪಿ ನಡ್ಡಾ, ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಮಾಜಿ ಉಪರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು ಕೂಡ ಉಪಸ್ಥಿತರಿದ್ದರು.
ಇದೇ ವೇಳೆ ನಟ ಪವನ್ ಕಲ್ಯಾಣ್, ನಾರಾ ಲೋಕೇಶ್ ಸೇರಿದಂತೆ ಇತರರು ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದರು. ಪವನ್ ಕಲ್ಯಾಣ್ ನೇತೃತ್ವದ ಸರ್ಕಾರಕ್ಕೆ ಮೂರು ಮತ್ತು ಬಿಜೆಪಿಗೆ ಒಂದು ಸಚಿವ ಸ್ಥಾನ ದೊರಕಿದೆ. ವಿಧಾನ ಸಭೆ ಚುನಾವಣೆಯಲ್ಲಿ ಟಿಡಿಪಿ ನೇತೃತ್ವದ ಎನ್‌ಡಿಎ 175 ಸ್ಥಾನಗಳ ಪೈಕಿ 164 ಸ್ಥಾನ ಪಡೆದುಕೊಂಡಿತ್ತು. ಆ ಮೂಲಕ ಟಿಡಿಪಿ ಸಂಪೂರ್ಣ ಬಹುಮತ ಸಾಧಿಸಿತ್ತು.
