Home ಕ್ರೀಡೆ ಇಂದಿನಿಂದ ಭಾರತ-ಆಸ್ಟ್ರೇಲಿಯಾ ನಡುವೆ ಮೊದಲ ಏಕದಿನ ಪಂದ್ಯ ಆರಂಭ

ಇಂದಿನಿಂದ ಭಾರತ-ಆಸ್ಟ್ರೇಲಿಯಾ ನಡುವೆ ಮೊದಲ ಏಕದಿನ ಪಂದ್ಯ ಆರಂಭ

0
ಇಂದಿನಿಂದ ಭಾರತ-ಆಸ್ಟ್ರೇಲಿಯಾ ನಡುವೆ ಮೊದಲ ಏಕದಿನ ಪಂದ್ಯ ಆರಂಭ

ಮೊಹಾಲಿ: ಇತ್ತೀಚೆಗೆ ನಡೆದಿರುವ ವಿಶ್ವ ಕಪ್ ಟೂರ್ನಿಯಲ್ಲಿ ಕಪ್ ಅನ್ನು ಗೆದ್ದಿರುವ ಭಾರತ ದೇಶ, ಇದೀಗ ಮೊಹಾಲಿಯ ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ ಐ ಎಸ್ ಬಿಂದ್ರ ಸ್ಟೇಡಿಯಂನಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆಯಲಿರುವ ಮೊದಲ ಏಕದಿನ ಪಂದ್ಯವನ್ನು ಗೆಲ್ಲುವ ತವಕದಲ್ಲಿದೆ.

ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ನಡೆಯುವ ಮೂರು ಪಂದ್ಯಗಳ ಏಕದಿನ ಸರಣಿಗೆ ಇಂದು ಚಾಲನೆ ದೊರಕಲಿದೆ.  ಇಂದು ನಡೆಯಲಿರುವ ಹೈ ವೋಲ್ಟೇಜ್‌ ಪಂದ್ಯವನ್ನು ನೋಡಲು ಕ್ರಿಕೆಟ್‌ ಪ್ರಿಯರು ಕಾತರದಿಂದ ಕಾಯುತ್ತಿದ್ದು, ಸದ್ಯದಲ್ಲೇ ವಿಶ್ವಕಪ್‌ ಆರಂಭವಾಗುವ ಹಿನ್ನೆಲೆ ಈ ಪಂದ್ಯ ಉಭಯ ತಂಡಗಳಿಗೆ ಬಹಳ ಮಹತ್ವದ ಪಂದ್ಯವಾಗಿದೆ.

ಇನ್ನು, ಭಾರತ ಮತ್ತು ಆಸ್ಟ್ರೇಲಿಯಾ ತಂಡದ ಮೊದಲ ಏಕದಿನ ಪಂದ್ಯ ಸ್ಪೋಟ್ಸ್‌ 18 ನಲ್ಲಿ ಇಂಗ್ಲೀಷ್‌ ನಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ. ಪಂದ್ಯವನ್ನು ಜಿಯೋ ಸಿನಿಮಾದಲ್ಲಿ ಉಚಿತವಾಗಿ ವೀಕ್ಷಿಸಬಹುದಾಗಿದೆ.

ಭಾರತ ತಂಡದಲ್ಲಿ ಕೆಎಲ್ ರಾಹುಲ್ (ನಾಯಕ), ಶುಭ್​ಮನ್ ಗಿಲ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ, ರುತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್, ರವಿಚಂದ್ರನ್ ಅಶ್ವಿನ್ ಮತ್ತು ವಾಷಿಂಗ್ಟನ್ ಸುಂದರ್ ಸೂರ್ಯಕುಮಾರ್ ಯಾದವ್,  ತಿಲಕ್ ವರ್ಮಾ, ಪ್ರಸಿದ್ಧ್ ಕೃಷ್ಣ ಕ್ರಿಕೆಟ್‌ ಆಡಲಿದ್ದಾರೆ.

ಆಸ್ಟ್ರೇಲಿಯಾ ತಂಡದಲ್ಲಿ ಪ್ಯಾಟ್ ಕಮ್ಮಿನ್ಸ್, ಸ್ಟೀವ್ ಸ್ಮಿತ್, ನಾಥನ್ ಎಲ್ಲಿಸ್, ಕ್ಯಾಮರೋನ್ ಗ್ರೀನ್, ಜೋಶ್ ಹ್ಯಾಝಲ್​ವುಡ್, ಜೋಶ್ ಇಂಗ್ಲಿಸ್, ಸ್ಪೆನ್ಸರ್ ಜಾನ್ಸನ್, ಮಿಚೆಲ್ ಮಾರ್ಷ್, ಡೇವಿಡ್ ವಾರ್ನರ್, ಅಲೆಕ್ಸ್ ಕ್ಯಾರಿ, ಮಾರ್ನಸ್ ಲಾಬುಶೇನ್, ಸೀನ್ ಅಬಾಟ್, ಗ್ಲೆನ್ ಮ್ಯಾಕ್ಸ್​ವೆಲ್, ತನ್ವೀರ್ ಸಾಂಘಾ, ಮ್ಯಾಟ್ ಶಾರ್ಟ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೊಯಿನಿಸ್, ಆಯಡಮ್ ಝಂಪಾ ಆಡಲಿದ್ದಾರೆ.

 

LEAVE A REPLY

Please enter your comment!
Please enter your name here