Home ಸುದ್ದಿಗಳು ನ್ಯಾಯಾಲಯದ ತೀರ್ಪು ಬರುವವರೆಗೆ ಯಾರೂ ರಾಜೀನಾಮೆ ಕೊಡಬೇಕಾಗಿಲ್ಲ: ಶಾಸಕ ಜಿ.ಟಿ.ದೇವೇಗೌಡ

ನ್ಯಾಯಾಲಯದ ತೀರ್ಪು ಬರುವವರೆಗೆ ಯಾರೂ ರಾಜೀನಾಮೆ ಕೊಡಬೇಕಾಗಿಲ್ಲ: ಶಾಸಕ ಜಿ.ಟಿ.ದೇವೇಗೌಡ

0
ನ್ಯಾಯಾಲಯದ ತೀರ್ಪು ಬರುವವರೆಗೆ ಯಾರೂ ರಾಜೀನಾಮೆ ಕೊಡಬೇಕಾಗಿಲ್ಲ: ಶಾಸಕ ಜಿ.ಟಿ.ದೇವೇಗೌಡ

ಮಂಗಳೂರು: ಕುಮಾರಸ್ವಾಮಿ ರಾಜೀನಾಮೆ ಕೊಡಿ, ಕಾಂಗ್ರೆಸ್‌ನವರು ಹಾಗೂ ಮುಖ್ಯಮಂತ್ರಿ ರಾಜೀನಾಮೆ ನೀಡಿ ಎಂದು ಬಿಜೆಪಿ, ದಳದವರು ಕೇಳುವುದು ಸರಿಯಲ್ಲ ಎಂದು ಶಾಸಕ ಜಿ.ಟಿ.ದೇವೇಗೌಡ ಹೇಳಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ನ್ಯಾಯಾಲಯದ ತೀರ್ಪು ಬಂದು ಯಾರು ತಪ್ಪಿತಸ್ಥ ಎಂದು ತೀರ್ಮಾನ ಆಗುತ್ತದೋ ಆಗ ಅವರು ರಾಜೀನಾಮೆ ನೀಡಬೇಕು, ಅವರನ್ನು ಜೈಲಿಗೆ ಕಳುಹಿಸುವ ಕೆಲಸವೂ ಆಗಬೇಕು.

ಹೀಗಾಗಿ ನ್ಯಾಯಾಲಯದ ತೀರ್ಪು ಬರುವವರೆಗೆ ಯಾರೂ ರಾಜೀನಾಮೆ ಕೊಡಬೇಕಾಗಿಲ್ಲ. ಹಾಗೆ ರಾಜೀನಾಮೆ ನೀಡುತ್ತಾ ಹೋದರೆ, ವಿಧಾನಸೌಧದಲ್ಲಿರುವ ಶೇ. 75 ಮಂದಿ ರಾಜೀನಾಮೆ ನೀಡಬೇಕಾಗುತ್ತದೆ ಎಂದರು.

ಚನ್ನಪಟ್ಟಣ ಉಪಚುನಾವಣೆ ಪ್ರಚಾರದಲ್ಲಿ ಪ್ರಚಾರ ಕಾರ್ಯದಿಂದ ಹೊರಗುಳಿದಿರುವ ವಿಚಾರಕ್ಕೆ ಸಂಬಂಧಿಸಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಯಾರು ಕೂಡ ನನ್ನನ್ನು ಚುನಾವಣೆ ಪ್ರಚಾರಕ್ಕೆ ಬನ್ನಿ ಎಂದು ಕರೆದಿಲ್ಲ. ಕೋರ್‌ ಕಮಿಟಿ ಅಧ್ಯಕ್ಷನಾಗಿದ್ದರೂ ಪ್ರಚಾರದ ಪಟ್ಟಿಯಿಂದ ನನ್ನ ಹೆಸರನ್ನು ತೆಗೆದಿದ್ದಾರೆ. ಯಾಕಾಗಿ ಈ ರೀತಿ ಮಾಡಿದ್ದಾರೆ ಎಂದು ಅವರೇ ಹೇಳಬೇಕು ಎಂದರು.

 

LEAVE A REPLY

Please enter your comment!
Please enter your name here