Home ಸುದ್ದಿಗಳು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

Orange alert in Dakshina Kannada, Udupi districts: Meteorological department forecast

ಬೆಂಗಳೂರು: ಕರ್ನಾಟಕದ ಕರಾವಳಿಯಲ್ಲಿ ಭಾರಿ ಮಳೆಯಾಗುವ  ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ಕರ್ನಾಟಕದ ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಮಲೆನಾಡಿನ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದ್ದು, ಉತ್ತರ ಒಳನಾಡಿನಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗಲಿದೆ.

ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬೆಳಗಾವಿ, ಶಿವಮೊಗ್ಗ, ಚಿಕ್ಕಮಗಳೂರು, ತುಮಕೂರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

 
Previous articleಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್
Next articleನ್ಯಾಯಾಲಯದ ತೀರ್ಪಿಗೆ ತಲೆಬಾಗಿ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಲಿ: ಬಿಜೆಪಿ