
ಉಡುಪಿ: ಪರಶುರಾಮ ಥೀಮ್ ಪಾರ್ಕ್‌ನಲ್ಲಿ ಪರಶುರಾಮನ ನಕಲಿ ಮೂರ್ತಿ ನಿರ್ಮಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಲ್ಪಿ ಕೃಷ್ಣ ನಾಯ್ಕ ಸಲ್ಲಿಸಿದ್ದ ನಿರೀಕ್ಷಣ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ.
“ಕೃಷ್ ಆರ್ಟ್ ವರ್ಲ್ಡ್’ ಎಂಬ ಸಂಸ್ಥೆಯ ಮೂಲಕ ಥೀಮ್ ಪಾರ್ಕ್‌ನಲ್ಲಿ ಕಂಚಿನ ಪರಶುರಾಮ ಮೂರ್ತಿಯನ್ನು ಸ್ಥಾಪಿಸಲು ಕೃಷ್ಣ ನಾಯ್ಕ ಅವರಿಗೆ ಉಡುಪಿ ನಿರ್ಮಿತಿ ಕೇಂದ್ರ ಗುತ್ತಿಗೆ ನೀಡಿತ್ತು.
ಕೃಷ್ಣ ನಾಯ್ಕ 1.25 ಕೋಟಿ ರೂ. ಹಣ ಪಡೆದುಕೊಂಡು ಕಂಚಿನ ಮೂರ್ತಿಯನ್ನು ಮಾಡದೆ ನಕಲಿ ಪರಶುರಾಮ ಮೂರ್ತಿಯನ್ನು ನಿರ್ಮಿಸಿ ಸರಕಾರಕ್ಕೆ ವಂಚನೆ ಮಾಡಿರುವುದಾಗಿ ಆರೋಪಿಸಲಾಗಿತ್ತು.
ಈ ಸಂಬಂಧ ನಲ್ಲೂರಿನ ಕೃಷ್ಣ ಶೆಟ್ಟಿ ಜೂನ್ ತಿಂಗಳಲ್ಲಿ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.
