
ಉಡುಪಿ: ಸನಾತನ ಧರ್ಮದ ಪ್ರತಿಪಾದಕ ಶ್ರೀನಾರಾಯಣ ಗುರುಗಳನ್ನು ಸನಾತನ ಧರ್ಮದ ಶತ್ರು ಎಂದು ಬಿಂಬಿಸುವ ಮೂಲಕ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವಮಾನಿಸಿದ್ದಾರೆ ಎಂದು ಕಾರ್ಕಳ ಶಾಸಕ, ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ವಿ.ಸುನಿಲ್ ಕುಮಾರ್ ಹೇಳಿದ್ದಾರೆ.
ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಹೇಳಿಕೆ ದುರುದ್ದೇಶಪೂರಿತ ಮತ್ತು ಸಂಪೂರ್ಣ ಖಂಡನೀಯ. ತರ್ಕಬದ್ಧ ಚಿಂತನೆಯನ್ನು ಉತ್ತೇಜಿಸುವ ನೆಪದಲ್ಲಿ ಹಿಂದೂ ನಂಬಿಕೆಗಳನ್ನು ಅವರು ಅವಮಾನಿಸಿದ್ದಾರೆ ಎಂದರು.
ಹಿಂದೂ ಧರ್ಮ ಪ್ರತಿಪಾದಕರ ಬಗ್ಗೆ ಬಾಲಿಶ ಹೇಳಿಕೆ ನೀಡುವ ಪಿಣರಾಯಿ ಅನ್ಯ ಧರ್ಮಧ ಧರ್ಮಗುರುಗಳ ಬಗ್ಗೆ ಇಂತಹ ಮಾತುಗಳನ್ನು ಹೇಳಲು ಸಿಎಂಗೆ ಧೈರ್ಯವಿದೆಯೇ ಎಂದು ಸುನಿಲ್ ಕುಮಾರ್ ಸವಾಲು ಹಾಕಿದರು.
ಸನಾತನ ಧರ್ಮವನ್ನು ದ್ವೇಷಿಸಬೇಕು ಎಂಬುದು ವಿಜಯನ್ ಅವರ ಶಿವಗಿರಿ ಸಮಾವೇಶದಲ್ಲಿ ಭಾಷಣದ ತಿರುಳು. ಅವರ ಹೇಳಿಕೆಯನ್ನು ಖಂಡಿಸುವೆ. ಅವರ ಹೇಳಿಕೆ ಹಿಂದೂಗಳನ್ನು ಘಾಸಿಗೊಳಿಸಿದೆ. ಅವರ ಮಾತುಗಳು ಸನಾತನ ಧರ್ಮವನ್ನು ನಿರ್ಮೂಲನೆ ಮಾಡಬೇಕು ಎಂಬ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಯ ಮುಂದುವರಿದ ಭಾಗದಂತಿದೆ ಎಂದರು.
ಕಮ್ಯುನಿಸ್ಟ್ ನ ಹಿಂದೂ ವಿರೋಧಿ ಇಂತಹ ದ್ವೇಷ ಪ್ರಚಾರವನ್ನು ಕೇರಳದ ಜನರು ತಿರಸ್ಕರಿಸಬೇಕು ಅಲ್ಲದೆ ಸಮಾಜ ಸುಧಾರಕರ ವಿರುದ್ಧ ಇಷ್ಟೊಂದು ಕೆಳ ಮಟ್ಟಕ್ಕೆ ಇಳಿದು ಸಾರ್ವಜನಿಕವಾಗಿ ಮಾತನಾಡಿದ ಕೇರಳ ಸಿಎಂ ವಿರುದ್ಧ ಸಮಸ್ತ ಹಿಂದೂಗಳು ತರಾಟೆಗೆ ತೆಗೆದುಕೊಂಡು ಸಿಎಂ ವಿರುದ್ದ ಸಿಡಿದೇಳಬೇಕು ಎಂದರು.
