Home ಸುದ್ದಿಗಳು ಕೋಟೆಕಾರು ದರೋಡೆ ಪ್ರಕರಣ: ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಗೆ ಗುಂಡು ಹಾರಿಸಿದ ಪೊಲೀಸರು

ಕೋಟೆಕಾರು ದರೋಡೆ ಪ್ರಕರಣ: ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಗೆ ಗುಂಡು ಹಾರಿಸಿದ ಪೊಲೀಸರು

0
ಕೋಟೆಕಾರು ದರೋಡೆ ಪ್ರಕರಣ: ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಗೆ ಗುಂಡು ಹಾರಿಸಿದ ಪೊಲೀಸರು

ಉಳ್ಳಾಲ: ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್‌ ದರೋಡೆ ಪ್ರಕರಣದ ಆರೋಪಿಯೊಬ್ಬನಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ತಲಪಾಡಿಯ ಕಾಟುಂಗರ ಗುಡ್ಡೆ ಬಳಿ ನಡೆದಿದೆ.

ದರೋಡೆ ಪ್ರಕರಣದಲ್ಲಿ ಬಂಧಿತನಾಗಿರುವ ಮುಂಬೈ ಚೆಂಬೂರು ತಿಲಕ್‌ ನಗರ ನಿವಾಸಿ ಕಣ್ಣನ್‌ ಮಣಿ (36) ಎಂಬಾತನ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ.

ಸ್ಥಳ ಮಹಜರು ಮಾಡುವ ವೇಳೆ ತಪ್ಪಿಸಿಕೊಳ್ಳುವ ಕಣ್ಣನ್‌ ಮಣಿ ಯತ್ನ ನಡೆಸಿದ್ದು, ಇದಕ್ಕೆ ಪ್ರತಿಕ್ರಿಯೆಯಾಗಿ, ಸಿಸಿಬಿ ಪೊಲೀಸ್ ಇನ್ಸ್‌ಪೆಕ್ಟರ್ ಆರೋಪಿಯ ಕಾಲಿಗೆ ಗುಂಡು ಹಾರಿಸಿ, ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ಘಟನೆಯಲ್ಲಿ ಉಳ್ಳಾಲ ಪಿ.ಎಸ್. ಇನ್ಸ್‌ಪೆಕ್ಟರ್ ಬಾಲಕೃಷ್ಣ, ಸಿಸಿಬಿ ಘಟಕದ ಪಿ.ಸಿ. ಅಂಜನಪ್ಪ ಮತ್ತು ಉಳ್ಳಾಲ ಪಿ.ಎಸ್. ಪಿ.ಸಿ. ನಿತಿನ್ ಅವರಿಗೆ ಗಾಯಗಳಾಗಿವೆ.

 

LEAVE A REPLY

Please enter your comment!
Please enter your name here