
ಮಂಗಳೂರು: ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್.ಎಂ.ಕೃಷ್ಣ ಅವರು ಇಂದು ಮುಂಜಾನೆ ಅಸೌಖ್ಯದಿಂದ ನಿಧನರಾದರು.
ಎಸ್.ಎಂ.ಕೃಷ್ಣ ನಿಧನದ ಕಾರಣದಿಂದ ಬುಧವಾರ (ಡಿ.11) ರಾಜ್ಯದಲ್ಲಿ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ರಾಜ್ಯದ ಎಲ್ಲಾ ಅಂಗನವಾಡಿ, ಶಾಲೆ-ಕಾಲೇಜುಗಳಿಗೆ ಬುಧವಾರ ರಜೆ ಇರಲಿದೆ.
ಮಂಗಳವಾರ (ಡಿ.10) ನಸುಕಿನ ಅಸುನೀಗಿದರು. ಕೆಲ ತಿಂಗಳಿನಿಂದ ಚಿಕಿತ್ಸೆ ಪಡೆಯುತ್ತಿದ್ದ ಎಸ್.ಎಂ.ಕೃಷ್ಣ ಅವರು
ಸರ್ಕಾರಿ ರಜೆಯ ಕಾರಣದಿಂದ ಬುಧವಾರ ನಡೆಯಬೇಕಿದ್ದ ಮಂಗಳೂರು ವಿಶ್ವವಿದ್ಯಾಲಯದ ಪದವಿ ಪರೀಕ್ಷೆಯನ್ನು ಮುಂದೂಡಲಾಗಿದೆ. ಈ ಪರೀಕ್ಷೆಯ ಮುಂದಿನ ದಿನಾಂಕವನ್ನು ತಿಳಿಸಲಾಗುವುದು ಎಂದು ವರದಿಯಾಗಿದೆ.
ಮಂಡ್ಯ ಜಿಲ್ಲೆ ಮದ್ದೂರಿನ ಸೋಮನಹಳ್ಳಿಯಲ್ಲಿ ಬುಧವಾರ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
