Home ಸುದ್ದಿಗಳು ಟ್ವೀಟ್ ಮೂಲಕ ಜನತೆಗೆ ಧನ್ಯವಾದ ತಿಳಿಸಿದ ರಾಹುಲ್ ಗಾಂಧಿ

ಟ್ವೀಟ್ ಮೂಲಕ ಜನತೆಗೆ ಧನ್ಯವಾದ ತಿಳಿಸಿದ ರಾಹುಲ್ ಗಾಂಧಿ

0
ಟ್ವೀಟ್ ಮೂಲಕ ಜನತೆಗೆ ಧನ್ಯವಾದ ತಿಳಿಸಿದ ರಾಹುಲ್ ಗಾಂಧಿ

ನವದೆಹಲಿ: ಜಾರ್ಖಂಡ್ ಹಾಗೂ ವಯನಾಡು ಕ್ಷೇತ್ರದಲ್ಲಿ ಕಾಂಗ್ರೆಸ್ ವಿಜಯಕ್ಕೆ ರಾಹುಲ್ ಗಾಂಧಿ ಟ್ವೀಟ್ ಮೂಲಕ ಜನತೆಗೆ ಧನ್ಯವಾದ ತಿಳಿಸಿದ್ದಾರೆ.

ಜಾರ್ಖಂಡ್‌ನಲ್ಲಿ `ಇಂಡಿಯಾ’ ಒಕ್ಕೂಟಕ್ಕೆ ಮತಚಲಾಯಿಸಿ ಗೆಲುವು ನೀಡಿದ್ದಕ್ಕೆ ಹೃತ್ಪೂರ್ವಕ ಧನ್ಯವಾದಗಳು. ಸಿಎಂ ಹೇಮಂತ್ ಸೊರೆನ್ ಅವರಿಗೆ ಹಾಗೂ ಕಾಂಗ್ರೆಸ್, ಜೆಎಂಎಂ ಪಕ್ಷದ ಎಲ್ಲಾ ಕಾರ್ಯಕರ್ತರಿಗೆ ಅಭಿನಂದನೆಯನ್ನು ತಿಳಿಸಿದ್ದಾರೆ.

ಈ ಗೆಲುವು ಕೇವಲ ಸಂವಿಧಾನದ ಜಯವಲ್ಲ. ಇದು ನೆಲ, ಜಲ, ಅರಣ್ಯಕ್ಕೆ ಸಲ್ಲುವ ಜಯವಾಗಿದೆ ಎಂದು ಬರೆದುಕೊಂಡಿದ್ದಾರೆ.

ಇನ್ನೂ ಮಹರಾಷ್ಟ್ರದ ಚುನಾವಣಾ ಫಲಿತಾಂಶ ಕುರಿತು ಹಂಚಿಕೊಂಡು, ರಾಜ್ಯದ ಎಲ್ಲಾ ಮತದಾರರಿಗೆ, ಕಾರ್ಯಕರ್ತರ ಶ್ರಮಕ್ಕಾಗಿ ಧನ್ಯವಾದಗಳು ತಿಳಿಸುತ್ತೇನೆ. ಆದರೆ ಮಹಾರಾಷ್ಟ್ರದ ಚುನಾವಣಾ ಫಲಿತಾಂಶ ಅನಿರೀಕ್ಷಿತವಾಗಿದ್ದು, ಈ ಕುರಿತು ವಿವರವಾಗಿ ವಿಶ್ಲೇಷಣೆ ನಡೆಸುತ್ತೇವೆ ಎಂದಿದ್ದಾರೆ.

ವಯನಾಡಿನಲ್ಲಿರುವ ನನ್ನ ಕುಟುಂಬದ ಜನತೆ ಪ್ರಿಯಾಂಕಾ ಅವರ ಮೇಲೆ ಇಟ್ಟಿರುವ ನಂಬಿಕೆಯ ಕುರಿತು ನನಗೆ ಹೆಮ್ಮೆಯಿದೆ. ವಯನಾಡಿನ ಪ್ರಗತಿಗಾಗಿ ಪ್ರಿಯಾಂಕಾ ಧೈರ್ಯದಿಂದ ಮುನ್ನಡೆಯುತ್ತಾಳೆ ಎಂದು ನಾನು ನಂಬಿದ್ದೇನೆ ಎಂದು ಬರೆದುಕೊಂಡಿದ್ದಾರೆ.

ಜಾರ್ಖಂಡ್‌ನ ಜೆಎಂಎಂ ನೇತೃತ್ವದ ಇಂಡಿಯಾ ಒಕ್ಕೂಟ 34 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದು, ಬಿಜೆಪಿ 21ರಲ್ಲಿ ಗೆಲುವು ಸಾಧಿಸಿದೆ.

 

LEAVE A REPLY

Please enter your comment!
Please enter your name here