
ಬೆಂಗಳೂರು: ಇಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.
ಉತ್ತರ ಒಳನಾಡಿನ ಬೆಳಗಾವಿ, ವಿಜಯಪುರ, ಕಲಬುರಗಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗಲಿದೆ.
ಇನ್ನು ಬೆಂಗಳೂರು ನಗರ ಸುತ್ತಮುತ್ತ ಮುಂದಿನ 24 ಗಂಟೆಯಲ್ಲಿ ಭಾಗಶಃ ಮೋಡ ಕವಿದ ಆಕಾಶ ಇರಲಿದ್ದು, ಒಣ ಹವಾಮಾನ ಮುಂದುವರಿಯಲಿದೆ.
ಉಳಿದಂತೆ ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಮುಖ್ಯವಾಗಿ ಶುಷ್ಕ ಹವಾಮಾನ ಇರಲಿದೆ.
