Home ಸುದ್ದಿಗಳು ಕರಾವಳಿ ಭಾಗದಲ್ಲಿ ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆ: ಹವಾಮಾನ ಇಲಾಖೆ ಎಚ್ಚರಿಕೆ

ಕರಾವಳಿ ಭಾಗದಲ್ಲಿ ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆ: ಹವಾಮಾನ ಇಲಾಖೆ ಎಚ್ಚರಿಕೆ

Moderate rain with thundershowers over coastal and northern interior: Meteorological Department

ಬೆಂಗಳೂರು: ಕರ್ನಾಟಕದ ಕರಾವಳಿ ಭಾಗದಲ್ಲಿ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಒಳನಾಡಿನಲ್ಲಿ ಪ್ರತ್ಯೇಕವಾಗಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಕರ್ನಾಟಕದ ಕರಾವಳಿಯ ದಕ್ಷಿಣ ಕನ್ನಡ, ಉಡುಪಿಯಲ್ಲಿ ವ್ಯಾಪಕ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಸಾಧ್ಯತೆ ಇದೆ.

ಉಡುಪಿ, ಉತ್ತರ ಕನ್ನಡ, ಬೀದರ್, ಕಲಬುರಗಿ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

 
Previous articleಸಿಬಿಐ ರಾಜ್ಯ ಪ್ರವೇಶಕ್ಕೆ ಸಂಪುಟದಿಂದ ಬಾಗಿಲು ಬಂದ್ ಮಾಡಿಸಿದ್ದೀರಿ: ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ
Next articleಶೀಘ್ರದಲ್ಲೇ ಉದ್ಘಾಟನೆಗೊಳ್ಳಲಿದೆ ನಾಗಸಂದ್ರ ಟು ಮಾದಾವರ ಮೆಟ್ರೋ ಸಂಚಾರ