ಬೆಂಗಳೂರು: ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.
ಮಲೆನಾಡಿನ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಗಾಳಿ ವೇಗದೊಂದಿಗೆ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ.
ದಕ್ಷಿಣ ಒಳನಾಡಿನ ತುಮಕೂರು, ಮಂಡ್ಯ, ಚಾಮರಾಜನಗರ, ಮೈಸೂರು ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಗುಡುಗು ಸಹಿತ ಬಿರುಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರು ಸುತ್ತಮುತ್ತ ಗುಡುಗು ಸಹಿತ ಲಘುವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಮಲೆನಾಡಿನ ಕೊಡಗು, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಚದುರಿದಂತೆ ಅಲ್ಲಲ್ಲಿ ತುಂಬಾ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಬಿರುಗಾಳಿ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
