
ತುಮಕೂರು: ಹಾಡಹಗಲೇ ಆಟೋದಲ್ಲಿ ಕರೆದೊಯ್ದು ಅಪ್ರಾಪ್ತ ಬಾಲಕಿಯ ಅತ್ಯಾಚಾರಕ್ಕೆ ಯತ್ನಿಸಿದ ಆಟೋ ಚಾಲಕನನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.
ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಯನ್ನು ತುಮಕೂರಿನ ಶಾಂತಿನಗರದ ಗೂಡ್‌ಶೆಡ್ ಕಾಲನಿ ನಿವಾಸಿ ಷಫಿ ಎಂದು ಗುರುತಿಸಲಾಗಿದೆ.
ಬಸ್ ನಿಲ್ದಾಣದ ಬಳಿ ಓಡಾಡುತ್ತಿದ್ದ ಏಳು ವರ್ಷದ ಬಾಲಕಿಯನ್ನು ಪುಸಲಾಯಿಸಿ ಆಟೋಗೆ ಹತ್ತಿಸಿಕೊಂಡ ಆಟೋ ಚಾಲಕ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಈ ವೇಳೆ ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದ ಆಟೋಚಾಲಕನನ್ನು ಪೊಲೀಸರಿಗೆ ಒಪ್ಪಿಸಲಾಗಿದ್ದು, ಬಾಲಕಿಯನ್ನು ರಕ್ಷಿಸಿ ತುಮಕೂರಿನ ಬಾಲ ಮಂದಿರಕ್ಕೆ ಕರೆದೊಯ್ಯಲಾಗಿದೆ. ಬಾಲಕಿಯು ಅನಾಥೆಯಾಗಿದ್ದು, ಭಿಕ್ಷೆ ಬೇಡಿಕೊಂಡು ಜೀವನ ಸಾಗಿಸುತ್ತಿದ್ದಳು ಎನ್ನಲಾಗಿದೆ.
ಇನ್ನು, ಪ್ರಕರಣ ಸಂಬಂಧ ತುಮಕೂರಿನ ಕ್ಯಾತ್ಸಂದ್ರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಆರೋಪಿ ಮತ್ತು ಆತನ ಆಟೋವನ್ನು ವಶಕ್ಕೆ ಪಡೆಯಲಾಗಿದೆ.
