
ಬೆಂಗಳೂರು: ಬೆಂಗಳೂರಿನ ರಾಮಮೂರ್ತಿ ನಗರದ ಹೊಯ್ಸಳ ನಗರದಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ, ಹತ್ಯೆ ಮಾಡಲಾಗಿದೆ.
ಆರೋಪಿಯನ್ನು ಬಿಹಾರ ಮೂಲದ ಅಭಿಷೇಕ್ ಕುಮಾರ್ (25) ಎಂದು ಗುರುತಿಸಲಾಗಿದೆ.
ಬಾಲಕಿಯ ಪೋಷಕರು ಗಾರೆ ಕೆಲಸಕ್ಕೆ ಹೋಗಿದ್ದರು. ಈ ಹಿನ್ನೆಲೆಯಲ್ಲಿ ಮನೆಯಲ್ಲಿ ಯಾರು ಇರಲಿಲ್ಲ. ಈ ವೇಳೆ ಮನೆಗೆ ಬಂದ ಅಭಿಷೇಕ್ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದಿದ್ದಾನೆ.
ಬಳಿಕ, ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾನೆ. ಅತ್ಯಾಚಾರವೆಸಗುವ ವೇಳೆ ಬಾಲಕಿ ನರಳಿ ನರಳಿ ಪ್ರಾಣ ಬಿಟ್ಟಿದ್ದಾಳೆ.
ರಾಮಮೂರ್ತಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ಅಭಿಷೇಕ್ನನ್ನು ಬಂಧಿಸಿದ್ದು, ಇನ್ನು, ಅಭಿಷೇಕ್ ಕುಮಾರ್ ಕೂಡ ಗಾರೆ ಕೆಲಸ ಮಾಡಿಕೊಂಡಿದ್ದನು ಎಂದು ತಿಳಿದುಬಂದಿದೆ.
