Home ಸುದ್ದಿಗಳು ವಯೋಸಹಜ ಕಾಯಿಲೆಯಿಂದ ರತನ್ ನಾವಲ್ ಟಾಟಾ ನಿಧನ

ವಯೋಸಹಜ ಕಾಯಿಲೆಯಿಂದ ರತನ್ ನಾವಲ್ ಟಾಟಾ ನಿಧನ

0
ವಯೋಸಹಜ ಕಾಯಿಲೆಯಿಂದ ರತನ್ ನಾವಲ್ ಟಾಟಾ ನಿಧನ

ಮುಂಬೈ: ದೇಶದ ಅಗ್ರಗಣ್ಯ ಉದ್ಯಮಿ, ಟಾಟಾ ಸನ್ಸ್ ಗೌರವಾಧ್ಯಕ್ಷ ರತನ್ ನಾವಲ್ ಟಾಟಾ (86) ಬುಧವಾರ ರಾತ್ರಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಇವರು ಚಿಕಿತ್ಸೆಗಾಗಿ ಮೊನ್ನೆಯಷ್ಟೇ ಮುಂಬೈನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಮತ್ತೆ ಅವರ ಅನಾರೋಗ್ಯ ಉಲ್ಬಣಿಸಿದಾಗ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ನಿನ್ನೆ ರಾತ್ರೆ ಕೊನೆಯುಸಿರೆಳೆದಿದ್ದಾರೆ.

1937ರಲ್ಲಿ ಜನಿಸಿದ ಅವರಿಗೆ ಭಾರತ ಸರ್ಕಾರವು 2008 ರಲ್ಲಿ ದೇಶದ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮವಿಭೂಷಣವನ್ನು ನೀಡಿ ಗೌರವಿಸಿತು.

ರತನ್ ಟಾಟಾ ಅನೇಕ ಪ್ರಮುಖ ಟಾಟಾ ಉದ್ಯಮಗಳಾದ ಟಾಟಾ ಸ್ಟೀಲ್, ಟಾಟಾ ಮೋಟರ್ಸ್, ಟಾಟಾ ಪವರ್, ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್, ಟಾಟಾ ಟೀ, ಟಾಟಾ ತಂತ್ರಜ್ಞಾನ, ಇಂಡಿಯನ್ ಹೋಟೆಲ್ಸ್ ಮತ್ತು ಟಾಟಾ ಟೆಲಿ ಸರ್ವಿಸಸ್ ಮುಂತಾದ ಕಂಪನಿಗಳನ್ನು ಸ್ಥಾಪಿಸಿದ್ದರು.

 

LEAVE A REPLY

Please enter your comment!
Please enter your name here