ಮಂಗಳೂರು/ಉಡುಪಿ: ರಾಜ್ಯದಲ್ಲಿ ಮುಂಗಾರಿನ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಕರಾವಳಿ ಜಿಲ್ಲೆಗಳಲ್ಲಿ ಇತ್ತೀಚೆಗೆ ಉತ್ತಮ ಮಳೆಯಾಗುತ್ತಿದ್ದು, ಮುಂದಿನ ಮೂರು ದಿನಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ ಹಾಗೂ ಕೊಡಗು ಜಿಲ್ಲೆಯಲ್ಲಿ ರೆಡ್‌ಅಲರ್ಟ್ ಘೊಷಣೆ ಮಾಡಲಾಗಿದ್ದು, ಇಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಉತ್ತರಕನ್ನಡ, ಚಿಕಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದರೆ, ಮೈಸೂರು, ಬೀದರ್, ಕಲಬುರಗಿ ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
