Home ಸುದ್ದಿಗಳು ರಾಜ್ಯ ಕನ್ನಡದ ಖ್ಯಾತ ಸಾಹಿತಿ ಡಾ.ಕಮಲಾ ಹಂಪನಾ ನಿಧನ

ಕನ್ನಡದ ಖ್ಯಾತ ಸಾಹಿತಿ ಡಾ.ಕಮಲಾ ಹಂಪನಾ ನಿಧನ

0
ಕನ್ನಡದ ಖ್ಯಾತ ಸಾಹಿತಿ ಡಾ.ಕಮಲಾ ಹಂಪನಾ ನಿಧನ

ಬೆಂಗಳೂರು: ಖ್ಯಾತ ಸಾಹಿತಿ ಡಾ.ಕಮಲಾ ಹಂಪನಾ(89) ಅವರು ಹೃದಯಾಘಾತದಿಂದ ಶನಿವಾರ ಬೆಳಿಗ್ಗೆ ಬೆಂಗಳೂರಿನ ತಮ್ಮ ಹಿರಿಯ ಪುತ್ರಿಯ ಮನೆಯಲ್ಲಿ ನಿಧನರಾಗಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿದ್ದಾರೆ ಎನ್ನಲಾಗಿದೆ.

ಕನ್ನಡ ಲೇಖಕಿಯಾಗಿ, ವಿದ್ವಾಂಸರಾಗಿ, ಪ್ರಾಧ್ಯಾಪಕರಾಗಿ ಶ್ರಮಿಸಿರುವ ಡಾ. ಕಮಲಾ ಹಂಪನಾ ಖ್ಯಾತ ವಾಗ್ಮಿ ಕೂಡ ಆಗಿದ್ದರು. ಕನ್ನಡ ಸಾಹಿತ್ಯದ ಎಲ್ಲಾ ಪ್ರಕಾರಗಳಲ್ಲೂ ಗಂಭೀರವಾಗಿ ಅಧ್ಯಯನ ಮತ್ತು ಸಂಶೋಧನೆ ನಡೆಸಿರುವ ಇವರು ಸಾಹಿತ್ಯ ಲೋಕಕ್ಕೆ ಅಪಾರ ಕೊಡುಗೆಯನ್ನು ನೀಡಿದ್ದಾರೆ.

ಮೃತರು ಪತಿ, ಇಬ್ಬರು ಪುತ್ರಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ. ಕಮಲಾ ಹಂಪನಾ ಅವರ ಪತಿ ಹಂ.ಪ.ನಾಗರಾಜಯ್ಯ ಕೂಡ ಸಾಹಿತಿ ಹಾಗೂ ಸಂಶೋಧಕರಾಗಿದ್ದಾರೆ. ಅಲ್ಲದೇ ಅವರು ಹಂಪಿ ವಿಶ್ವವಿದ್ಯಾಲಯದಿಂದ ನಾಡೋಜ ಪ್ರಶಸ್ತಿಗೂ ಕೂಡ ಭಾಜನರಾಗಿದ್ದಾರೆ.

ಇನ್ನು, ಡಾ.ಕಮಲಾ ಹಂಪನಾ ಅವರ ಪಾರ್ಥಿವ ಶರೀರವನ್ನು ಬೆಂಗಳೂರಿನ ಅವರ ನಿವಾಸಕ್ಕೆ ಕರೆತಂದು, ಅಲ್ಲಿಯೇ ಸಾರ್ವಜನಿಕರಿಗೆ ಅಂತಿಮ ದರ್ಶನದ ವ್ಯವಸ್ಥೆ ಮಾಡಿಕೊಡಲಾಗುವುದು ಎಂದು ಹೇಳಲಾಗಿದೆ.

 

LEAVE A REPLY

Please enter your comment!
Please enter your name here