Home ಸುದ್ದಿಗಳು ರಾಷ್ಟ್ರೀಯ ಹೆದ್ದಾರಿ ಅವ್ಯವಸ್ಥೆಗೆ ಸಂಬಂಧಿಸಿದ ಅಹವಾಲಿಗೆ ಅವಕಾಶ: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

ರಾಷ್ಟ್ರೀಯ ಹೆದ್ದಾರಿ ಅವ್ಯವಸ್ಥೆಗೆ ಸಂಬಂಧಿಸಿದ ಅಹವಾಲಿಗೆ ಅವಕಾಶ: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Planning to hold international film festival from next year: Collector Mullai Mugilan

ಮಂಗಳೂರು: ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಗೆ ಸಂಬಂಧಿಸಿದ ಅಹವಾಲುಗಳನ್ನು ಹೇಳಿಕೊಳ್ಳಲು ಅವಕಾಶ ಕಲ್ಪಿಸಲಾಗುವುದು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ತಿಳಿಸಿದ್ದಾರೆ.

ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಹೆದ್ದಾರಿ ನಿರ್ಮಾಣ, ನಿರ್ವಹಣೆ ವಿಷಯದಲ್ಲಿ ಸಮಸ್ಯೆ ಇರುವುದು ನಿಜ. ಸಮಸ್ಯೆಗಳನ್ನು ಆದಷ್ಟೂ ಪರಿಹರಿಸಲಾಗುತ್ತಿದೆ.

ಸಮಸ್ಯೆ ಕುರಿತು ನಾಗರಿಕ ಗುಂಪು, ಸಂಘಟನೆಗಳಿಗೆ ಯಾವುದೇ ಅಹವಾಲುಗಳಿದ್ದರೆ ಅದನ್ನು ಹೇಳಿಕೊಳ್ಳಲು ಮುಕ್ತ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ವಾಟ್ಸಾಪ್‌ ಗ್ರೂಪ್‌ ರಚಿಸಲಾಗುವುದು ಎಂದರು.

ನಂತೂರು, ಕೆಪಿಟಿ ಭಾಗದಲ್ಲಿ ಕೆಲಸ ನಡೆಯುತ್ತಿದೆ. ಕೂಳೂರಿನಲ್ಲಿ ಷಟ್ಪಥ ಸೇತುವೆ ನಿರ್ಮಾಣದಲ್ಲಿ ಗುತ್ತಿಗೆದಾರರಿಂದ ಸಾಕಷ್ಟು ವಿಳಂಬವಾಗಿದೆ. ಈಗ ಕೆಲಸ ಆರಂಭಿಸಿದ್ದರೂ ನಿಧಾನಗತಿಯಲ್ಲಿದೆ. ನಿರಂತರವಾಗಿ ಹೆದ್ದಾರಿ ಪ್ರಾಧಿ ಕಾರಕ್ಕೆ ಸೂಚನೆ ನೀಡಲಾಗುತ್ತಿದೆ ಎಂದರು.

 
Previous articleಅಕ್ರಮವಾಗಿ ಮದ್ಯ ದಾಸ್ತಾನು, ಸಾಗಾಟ ಪ್ರಕರಣ: ಆರೋಪಿ ಖುಲಾಸೆ
Next articleಓವರ್‌ಟೆಕ್ ಮಾಡಲು ಹೋಗಿ ಬೈಕ್‌ಗೆ ಕಾರು ಡಿಕ್ಕಿ: ಇಬ್ಬರ ದುರ್ಮರಣ