Home ಸುದ್ದಿಗಳು ರಸ್ತೆ ಅಪಘಾತ: ಮರಕ್ಕೆ ಕಾರು ಡಿಕ್ಕಿ ಹೊಡೆದು ಯುವಕ ಸಾವು

ರಸ್ತೆ ಅಪಘಾತ: ಮರಕ್ಕೆ ಕಾರು ಡಿಕ್ಕಿ ಹೊಡೆದು ಯುವಕ ಸಾವು

0
ರಸ್ತೆ ಅಪಘಾತ: ಮರಕ್ಕೆ ಕಾರು ಡಿಕ್ಕಿ ಹೊಡೆದು ಯುವಕ ಸಾವು

ರಾಮನಗರ: ಕನಕಪುರ ತಾಲೂಕಿನ ದೊಡ್ಡಮುದವಾಡಿ ಗ್ರಾಮದ ಬಳಿ ಇಂದು ಮುಂಜಾನೆ ಮರಕ್ಕೆ ಕಾರು ಡಿಕ್ಕಿಯಾದ ಘಟನೆ ನಡೆದಿದೆ. ಈ ಘಟನೆಯಲ್ಲಿ ಓರ್ವ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬ ಗಂಭೀರ ಗಾಯಗೊಂಡಿದ್ದಾರೆ.

ಮೃತನನ್ನು ವಿನಯ್ (24) ಎಂದು ಗುರುತಿಸಲಾಗಿದೆ. ಅನಿಕೇತ್ ಎಂಬವನಿಗೆ ಗಂಭೀರ ಗಾಯವಾಗಿದೆ.

ಕಾರಿನಲ್ಲಿದ್ದವರು ಬೆಂಗಳೂರಿನ ಇಟ್ಟಮಡು ನಿವಾಸಿಗಳಾಗಿದ್ದು, ವೀಕೆಂಡ್ ಹಿನ್ನೆಲೆ ರೆಸಾರ್ಟ್‌ಗೆ ಬಂದಿದ್ದರು. ಹಿಂತಿರುಗಿ ಹೋಗುವಾಗ ಅಪಘಾತ ಸಂಭವಿಸಿದೆ.

ಇಂದು ಬೆಳ್ಳಂಬೆಳಗ್ಗೆ ನಿದ್ರೆ ಮಂಪರಿನಲ್ಲಿದ್ದ ಕಾರು ಚಾಲಕ ನಿಯಂತ್ರಣ ಕಳೆದುಕೊಂಡು ಮರಕ್ಕೆ ಗುದ್ದಿದೆ. ಸ್ಥಳೀಯರು ಗಾಯಾಳುವನ್ನ ಹಾರೋಹಳ್ಳಿಯ ದಯಾನಂದ ಸಾಗರ ಆಸ್ಪತ್ರೆಗೆ ದಾಖಲಿಸಿದ್ದಾರೆ.

 

LEAVE A REPLY

Please enter your comment!
Please enter your name here