
ಮಂಗಳೂರು: ಆಡಳಿತ ಪಕ್ಷ ಹಾಗೂ ವಿಪಕ್ಷಗಳು ತಮ್ಮ ವಿವಿಧ ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ ಎಂದು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಮನವಿ ಮಾಡಿದರು.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿಸೆಂಬರ್ 9 ರಿಂದ 19ರವರೆಗೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನ ನಡೆಯಲಿದೆ.
ರಾಜ್ಯದ ಜನತೆಯ ಮುಖ್ಯವಾಗಿ ಉತ್ತರ ಕರ್ನಾಟಕದ ಭಾಗದ ಜನತೆಯ ಹಿತದೃಷ್ಟಿಯಿಂದ ಚರ್ಚೆ ಕಲಾಪ ನಡೆಸಬೇಕು ಎಂದು ಮನವಿ ಮಾಡಿದರು.
ಡಿಸೆಂಬರ್ 9ರಂದು ಮಧ್ಯಾಹ್ನ 1 ಗಂಟೆಗೆ ನಡೆಯಲಿರುವ ಬಿಸಿನೆಸ್ ಅಡ್ವೈಸರಿ ಕಮಿಟಿ ಸಭೆಯಲ್ಲಿ ಈ ಬಾರಿಯ ಅಧಿವೇಶನದ ಮುಖ್ಯಾಂಶಗಳ ಬಗ್ಗೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.
