Home ಸುದ್ದಿಗಳು ನಿಷೇಧಿತ ಡ್ರಗ್ಸ್‌ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ

ನಿಷೇಧಿತ ಡ್ರಗ್ಸ್‌ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ

0
ನಿಷೇಧಿತ ಡ್ರಗ್ಸ್‌ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ

ಮಂಗಳೂರು: ಸಾರ್ವಜನಿಕರು ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ನಿಷೇಧಿತ ಡ್ರಗ್ಸ್‌ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳನ್ನು ಮೂಡಗ್ರಾಮದ ಮೊಹಮ್ಮದ್‌ ಆಸೀಫ್ (34) ಮತ್ತು ನಿಯಾಜ್‌ ಎನ್‌.ಎ.(40) ಎಂದು ಗುರುತಿಸಲಾಗಿದೆ.

ಮಂಗಳೂರು ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯ ಪಿಲಿಕುಳದ ಬಳಿ ಇರುವ ದೂರದರ್ಶನ ಕೇಂದ್ರದ ಮುಂಭಾಗದ ಗೇಟ್‌ನ ಬಳಿಯಲ್ಲಿ ಮಂಗಳೂರು ನಗರ ದಕ್ಷಿಣ ಉಪವಿಭಾಗದ ಡ್ರಗ್ಸ್‌ ನಿಗ್ರಹ ತಂಡ ಇಬ್ಬರನ್ನು ಬಂಧಿಸಿದೆ.

ಬಂಧಿತ ಆರೋಪಿಗಳಿಂದ ಅಂದಾಜು 20 ಸಾವಿರ ರೂ. ಮೌಲ್ಯದ ಸುಮಾರು 958 ಗ್ರಾಂ ಗಾಂಜಾ ಮತ್ತು ಮೊಬೈಲ್‌ ಫೋನ್‌ ಅನ್ನು ವಶಪಡಿಸಿಕೊಂಡಿದ್ದಾರೆ.

 

LEAVE A REPLY

Please enter your comment!
Please enter your name here