Home ಸುದ್ದಿಗಳು ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ

ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ

0
ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ

ಕಾರ್ಕಳ: ದಾವಣಗೆರೆಯಲ್ಲಿ ಜರುಗಿದ ಸಹಕಾರ ಭಾರತಿಯ 7ನೇ ರಾಜ್ಯ ಅಧಿವೇಶನದಲ್ಲಿ ಸಾಣೂರು ನರಸಿಂಹ ಕಾಮತ್ ರವರನ್ನು ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

ಚುನಾವಣಾ ಅಧಿಕಾರಿಯಾಗಿದ್ದ ಹಿರಿಯ ಸಹಕಾರಿ ಬಾಗಲಕೋಟೆಯ ಜಿ ಎನ್ ಪಾಟೀಲ್ ರವರು ಮುಂದಿನ ಮೂರು ವರ್ಷದ ಅವಧಿಗೆ ಈ ಆಯ್ಕೆಯನ್ನು ಘೋಷಿಸಿದರು.

ಮೆಕ್ಯಾನಿಕಲ್ ಇಂಜಿನಿಯರಿಂಗ್ ಶಿಕ್ಷಣದ ಜೊತೆಗೆ ರಾಜಕೀಯ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಸಾಣೂರು ನರಸಿಂಹ ಕಾಮತ್ ಕಾರ್ಕಳ ತಾಲೂಕಿನ ಸಾಣೂರಿನಲ್ಲಿ ಶ್ರೇಯಸ್ ಇಂಜಿನಿಯರಿಂಗ್ ಇಂಡಸ್ಟ್ರೀಸ್ ಸ್ವಂತ ಉದ್ದಿಮೆಯನ್ನು ನಡೆಸುತ್ತಿದ್ದಾರೆ.

ಕೋ ಆಪರೇಟಿವ್ ನ ನಿರ್ದೇಶಕರಾಗಿರುವ ಇವರು ಕಳೆದ ಎರಡು ದಶಕಗಳಿಂದ ಸಹಕಾರಿ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ.

ಸಾಣೂರು ಹಾಲು ಉತ್ಪಾದಕರ ಸಹಕಾರಿ ಸಂಘ (ರಿ ),ಸಾಣೂರು ಇದರ ಅಧ್ಯಕ್ಷರಾಗಿದ್ದು, ಪರಂಪರಾ ವಿದ್ದೋದ್ದೇಶ ಸಹಕಾರಿ ಸಂಘ ನಿಯಮಿತ, ಕಾರ್ಕಳ ಇದರ ನಿರ್ದೇಶಕರಾಗಿದ್ದು, ಸಹಕಾರ ಭಾರತಿಯ ರಾಜ್ಯ ಹಾಲು ಪ್ರಕೋಷ್ಟದ ಸಂಚಾಲಕರಾಗಿ ಕಾರ್ಯನಿರ್ವಹಿಸಿದ್ದಾರೆ.

ಸಾಣೂರು ಗ್ರಾಮ ಪಂಚಾಯತ್ ನಲ್ಲಿ ಎರಡು ಅವಧಿಗೆ ಅಧ್ಯಕ್ಷರಾಗಿದ್ದು ಅಂತರಾಷ್ಟ್ರೀಯ ಗೂಗಲ್ ಗ್ರಾಮ ಪಂಚಾಯತ್ ಪುರಸ್ಕಾರ ಮತ್ತು ರಾಷ್ಟ್ರಪತಿಗಳ ನಿರ್ಮಲ ಗ್ರಾಮ ಪುರಸ್ಕಾರವನ್ನು ಪಡೆದಿದ್ದಾರೆ.

 

LEAVE A REPLY

Please enter your comment!
Please enter your name here