
ಉಳ್ಳಾಲ: ಬಾರ್‌ವೊಂದರ ಬಳಿ ಅಕ್ರಮವಾಗಿ ಮಾದಕ ವಸ್ತು ಎಂಡಿಎಂಎಯನ್ನು ಮಾರಾಟ ಮಾಡುತ್ತಿದ್ದ ಘಟನೆ ಉಳ್ಳಾಲದ ತಲಪಾಡಿಯಲ್ಲಿ ನಡೆದಿದೆ.
ಅಕ್ರಮವಾಗಿ ಮಾದಕ ವಸ್ತು ಮಾರಾಟ ಮಾಡುತಿದ್ದ ವ್ಯಕ್ತಿಯನ್ನು ತಲಪಾಡಿ ನಾರ್ಲ ಪಡೀಲ್ ನಿವಾಸಿ ಕಿರಣ್ ಡಿ’ಸೋಜಾ (25) ಎಂದು ಗುರುತಿಸಲಾಗಿದೆ.
ಆರೋಪಿಯನ್ನು ಮಂಗಳೂರು ನಗರದ ದಕ್ಷಿಣ ಉಪವಿಭಾಗದ ಆ್ಯಂಟಿ ಡ್ರಗ್ ಟೀಮ್ ಬಂಧಿಸಿದೆ.
ಆತನಿಂದ 30 ಸಾವಿರ ರೂ. ಮೌಲ್ಯದ 10 ಗ್ರಾಂ ನಿಷೇಧಿತ ಮಾದಕ ವಸ್ತು ಎಂಡಿಎಂಎ ಸಹಿತ ಸಾಗಾಟಕ್ಕೆ ಬಳಸಿದ್ದ ಸ್ಕೂಟರ್ ಮತ್ತು ಮೊಬೈಲ್ ಫೋನ್ ಅನ್ನು ಕೂಡ ವಶಪಡಿಸಿಕೊಂಡಿದ್ದಾರೆ.
ಆರೋಪಿಯ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
