Home ಸುದ್ದಿಗಳು ಬಾಡಿಗೆ ಮನೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಜೋಡಿಯ ಬಂಧನ

ಬಾಡಿಗೆ ಮನೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಜೋಡಿಯ ಬಂಧನ

0
ಬಾಡಿಗೆ ಮನೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಜೋಡಿಯ ಬಂಧನ
Close up of male hands in bracelets behind back

ಉಳ್ಳಾಲ: ಬಾಡಿಗೆ ಮನೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಜೋಡಿಯನ್ನು ಪೊಲೀಸರು ಬಂಧಿಸಿದ ಘಟನೆ ಕಿನ್ಯಾ ರೆಹಮತ್ ನಗರ ಕಜೆ ಬಾಕಿಮಾರು ಎಂಬಲ್ಲಿ ನಡೆದಿದೆ.

ಬಂಧಿತ ಆರೋಪಿಗಳನ್ನು, ಮಾಡೂರು ನಿವಾಸಿ ನಜೀರ್ ಹುಸೈನ್ (50) ಮತ್ತು ಕಿನ್ಯಾ ರೆಹಮತ್ ನಗರದ ಅಫ್ಸಾತ್ (37) ಎಂದು ಗುರುತಿಸಲಾಗಿದೆ.

ಬಂಧಿತರಿಂದ 2,04,000 ರೂ ಮೌಲ್ಯದ 8 ಕೆ.ಜಿ ಗಾಂಜಾ ಸಹಿತ ಮಾರಾಟಕ್ಕೆ ಬಳಸಿದ್ದ ಕಾರು, ಎರಡು ಮೊಬೈಲ್ ಹಾಗೂ ಒಟ್ಟು ರೂ. 5,14,810 ಬೆಲೆಯ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

195/2024 ಕಲಂ ನಡಿ ಎನ್ ಡಿಪಿಎಸ್ ಆಕ್ಟ್ 1985 ಮತ್ತು ಬಿಎನ್ ಎಸ್ ಕಾಯಿದೆಗಳಡಿ ಪ್ರಕರಣಗಳು ದಾಖಲಾಗಿವೆ.

ಮಂಗಳೂರು ನಗರ ದಕ್ಷಿಣ ಉಪವಿಭಾಗದ ಅ್ಯಂಟಿ ಡ್ರಗ್ ಟೀಂ ನೇತೃತ್ವದ ಪೊಲೀಸ್ ತಂಡ ಈ ಜೋಡಿಯನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದೆ.

 

LEAVE A REPLY

Please enter your comment!
Please enter your name here