ಬೆಂಗಳೂರು: ನವೆಂಬರ್ 1ರಂದು 50ನೇ ವಷದ ಕನ್ನಡ ರಾಜ್ಯೋತ್ಸವ ಆಚರಣೆ ಹಿನ್ನೆಲೆ 5 ಕನ್ನಡ ಗೀತೆಗಳನ್ನು ಕಡ್ಡಾಯವಾಗಿ ಹಾಡುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಆ ಮೂಲಕ ಯುವ ಜನತೆಯಲ್ಲಿ ಕನ್ನಡ-ಕನ್ನಡಿಗ-ಕರ್ನಾಟಕ ಅರಿವು ಮೂಡಿಸುವ ಯೋಜನೆಯನ್ನು ಹಮ್ಮಿಕೊಳ್ಳುವಂತೆ ತಿಳಿಸಿದೆ.
ಈ ಬಗ್ಗೆ ಆದೇಶ ಹೊರಡಿಸಿರುವ ರಾಜ್ಯ ಸರ್ಕಾರ, ರಾಜ್ಯದ ಎಲ್ಲಾ ಜಿಲ್ಲಾ ಹಾಗೂ ತಾಲೂಕು ಮತ್ತು ಗ್ರಾಮ ಪಂಚಾಯತ್ ಮಟ್ಟದಲ್ಲಿ ನವೆಂಬರ್ 1ರಂದು ಧ್ವಜಾರೋಹಣ, ರಾಷ್ಟ್ರಗೀತೆ, ನಾಡಗೀತೆ, ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಬಳಿಕ ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು, ಎಲ್ಲಾದರೂ ಇರು ಎಂತಾದರು ಇರು, ಒಂದೇ ಒಂದೇ ಕರ್ನಾಟಕ ಒಂದೇ, ಹೊತ್ತಿತೋ ಹೊತ್ತಿತು ಕನ್ನಡ ದೀಪ ಮತ್ತು ಹೆಸರಾಯಿತು ಕರ್ನಾಟಕ-ಉಸಿರಾಗಲಿ ಕನ್ನಡ ಗೀತೆಗಳನ್ನು ಕಡ್ಡಾಯವಾಗಿ ಹಾಡುವಂತೆ ಸೂಚಿಸಿದೆ.
