
ಕೈಕಂಬ: ಎಡಪದವು ಗ್ರಾಮ ಪಂಚಾಯತ್ ಬಳಿ ವಿಳಾಸ ಕೇಳುವ ನೆಪದಲ್ಲಿ ಮಹಿಳೆಯೋರ್ವರ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಕಸಿದು ಪರಾರಿಯಾಗಿರುವ ಘಟನೆ ನಡೆದಿದೆ.
ಎಡಪದವಿನ ಅನುಸೂಯ ಕಾಜವ ಎನ್ನುವವರ ಸರ ಕಸಿದು ಪರಾರಿಯಾಗಿದ್ದಾರೆ.
ಶನಿವಾರ ಮಧ್ಯಾಹ್ನ ಅನುಸೂಯ ನಡೆದುಕೊಂಡು ಹೋಗುತ್ತಿದ್ದ ವೇಳೆ ಹೆಲ್ಮೆಟ್ ಧರಿಸಿಕೊಂಡು ಬೈಕ್ನಲ್ಲಿ ಬಂದ ವ್ಯಕ್ತಿಗಳು ಅನುಸೂಯ ಅವರ ಬಳಿ ವಿಳಾಸ ಕೇಳುವ ನೆಪದಲ್ಲಿ ಅವರ ಕೊರಳಲ್ಲಿದ್ದ ಸುಮಾರು 2 ಪವನ್ ಚಿನ್ನದ ಸರವನ್ನು ಎಳೆದು ಪರಾರಿಯಾಗಿದ್ದಾರೆ.
ಈ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
