
ಬಂಟ್ವಾಳ: ರಾಜ್ಯದಲ್ಲಿ ಹಿಂಗಾರು ಮಳೆ ಜೋರಾಗಿದ್ದು, ಕಳೆದ ಕೆಲವು ದಿನಗಳಿಂದ ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪುಂಜಾಲಕಟ್ಟೆ ಸಮೀಪದ ಕುಕ್ಕಳ ಗ್ರಾಮದ ಮಂಜಲ್ ಪಲ್ಕೆಯಲ್ಲಿ ಸಿಡಿಲು ಬಡಿದು ಎರಡು ತೆಂಗಿನ ಮರಗಳು ಹೊತ್ತಿ ಉರಿದಿರುವ ಘಟನೆ ನಡೆದಿದೆ.
ಮಂಜಲ್ ಪಲ್ಕೆ ನಿವಾಸಿ ಖಾದರ್ ಎಂಬುವವರ ಮನೆಯ ಅಂಗಳದಲ್ಲಿರುವ ತೆಂಗಿನ ಮರಕ್ಕೆ ಸಿಡಿಲು ಬಡಿದಿದ್ದು, ಎರಡು ತೆಂಗಿನ ಮರಗಳು ಹೊತ್ತಿ ಉರಿದಿದೆ. ಅದೃಷ್ಟವಶಾತ್ ಮನೆ ಮಂದಿಗೆ ಯಾವುದೇ ಅಪಾಯ ಸಂಭವಿಸಿಲ್ಲ.
