
ಬೆಂಗಳೂರು: ರಾಜ್ಯದಲ್ಲಿ ಕಳೆದ ನಾಲ್ಕೈದು ದಿನಗಳಿಂದ ಉತ್ತಮ ಮಳೆಯಾಗುತ್ತಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ನಾಲ್ಕೈದು ದಿನ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನಸೂಚನೆ ನೀಡಿದೆ.
ಇಂದು ಮತ್ತು ನಾಳೆ ಎರಡು ದಿನಗಳ ಕಾಲ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಹೇಳಲಾಗಿದೆ. ಇನ್ನು ಮುಂದಿನ 24 ಗಂಟೆಗಳಲ್ಲಿ ಕರಾವಳಿ ಭಾಗದಲ್ಲಿ ಬಿರುಗಾಳಿ ಬೀಸಲಿರುವ ಹಿನ್ನೆಲೆ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
