Home ಕರ್ನಾಟಕ ಕರಾವಳಿ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ ಯುವಕನ ಮೃತದೇಹ ಪತ್ತೆ

ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ ಯುವಕನ ಮೃತದೇಹ ಪತ್ತೆ

0
ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ ಯುವಕನ ಮೃತದೇಹ ಪತ್ತೆ

ಉಳ್ಳಾಲ: ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ ಯುವಕನ ಶವ ಮಂಗಳವಾರ ಪತ್ತೆಯಾಗಿದೆ. ನಗರದ ಪಣಂಬೂರು ಪೊಲೀಸ್‌ ಠಾಣೆ ವ್ಯಾಪ್ತಿಯ ತೋಟಬೇಂಗ್ರೆ ಬಳಿಯಲ್ಲಿ ಮೃತದೇಹ ಪತ್ತೆಯಾಗಿದೆ.ಮೃತರನ್ನು ಚಿಕ್ಕಮಗಳೂರಿನ ಮುಗುಳಬಳ್ಳಿ ಗೋಕುಲ್‌ ಫಾರ್ಮ ನಿವಾಸಿ ಬಿ.ಎಸ್‌. ಶಂಕರಗೌಡ ಎಂಬುವವರ ಪುತ್ರ ಪ್ರಸನ್ನ(37) ಎಂದು ಗುರುತಿಸಲಾಗಿದೆ.

ಸ್ಥಳೀಯ ಈಜುಗಾರರು, ಅಗ್ನಿಶಾಮಕ ದಳ, ಮೀನುಗಾರರ ಸಹಕಾರದಿಂದ ನದಿಯಲ್ಲಿ ಹುಡುಕಾಟ ನಡೆಸಿದ್ದು, ಇದೀಗ ಯುವಕನ ಶವ ಪತ್ತೆಯಾಗಿದೆ. ಇವರು ಮಂಗಳೂರಿನ ಮಾರುಕಟ್ಟೆಗೆ ಕೊತ್ತುಂಬರಿ ಸೊಪ್ಪು ಪೂರೈಸುತ್ತಿದ್ದರು. ಕೃಷಿ ಉದ್ಯಮದಲ್ಲಿ ತೊಡಗಿಕೊಂಡಿದ್ದ ಇವರಿಗೆ ಯಾವುದೇ ಆರ್ಥಿಕ ಸಮಸ್ಯೆ ಇರಲಿಲ್ಲ ಎನ್ನಲಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಘಟನೆ ಹಿನ್ನೆಲೆ
ಉದ್ಯಮಿ ಪ್ರಸನ್ನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ತನ್ನ ಸಂಬಂಧಿಯೋಬರ ಆರೋಗ್ಯ ವಿಚಾರಿಸಿ ಹಣ ನೀಡಿ ಬಂದಿದ್ದರು. ಬಳಿಕ ಕಾರಿನಲ್ಲಿ ವಾಪಸ್‌ ನೇತ್ರಾವತಿ ಸೇತುವ ಬಳಿಗೆ ಬಂದ ಪ್ರಸನ್ನ ಸೇತುವೆ ಬಳಿ ಕಾರನ್ನು ನಿಲ್ಲಿಸಿ ಪರ್ಸ್, ಮೊಬೈಲ್‌ ಅನ್ನು ಕಾರಿನಲ್ಲೇ ಇಟ್ಟು ಸೇತುವೆ ಬದಿಯಿಂದ ಪೈಪ್‌ ಮೂಲಕ ತೆರಳಿ ಅಲ್ಲಿಂದ ನದಿಗೆ ಹಾರಿದ್ದಾರೆ ಎನ್ನಲಾಗಿದೆ.

 

LEAVE A REPLY

Please enter your comment!
Please enter your name here