Home ರಾಜ್ಯ ಅಕ್ಕಿ ವಿಚಾರದಲ್ಲೂ ಕೇಂದ್ರ ಸರ್ಕಾರ ರಾಜಕೀಯ ಮಾಡುತ್ತಿದೆ, ಬಿಜೆಪಿ ಬಡವರ ವಿರೋಧಿ: ಸಿಎಂ ಸಿದ್ದರಾಮಯ್ಯ

ಅಕ್ಕಿ ವಿಚಾರದಲ್ಲೂ ಕೇಂದ್ರ ಸರ್ಕಾರ ರಾಜಕೀಯ ಮಾಡುತ್ತಿದೆ, ಬಿಜೆಪಿ ಬಡವರ ವಿರೋಧಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಚುನಾವಣೆ ವೇಳೆ ಕಾಂಗ್ರೆಸ್‌ ನೀಡಿರುವ ಭರವಸೆಗಳಲ್ಲಿ ಅನ್ನಭಾಗ್ಯ ಯೋಜನೆ ಕೂಡ ಒಂದು. ಈ ಯೋಜನೆಯನ್ವ ಬಿಪಿಎಲ್‌, ಅಂತ್ಯೋದಯ ಕಾರ್ಡ್ ನವರಿಗೆ ತಲಾ 10ಕೆ.ಜಿ. ಅಕ್ಕಿ ನೀಡಲಾಗುತ್ತದೆ ಎಂದು ಕಾಂಗ್ರೆಸ್‌ ಹೇಳಿತ್ತು. ಅದರಂತೆ ಜುಲೈ 1ರಿಂದ ಈ ಯೋಜನೆ ಜಾರಿಗೆ ಬರಬೇಕಿತ್ತು, ಆದರೆ ಇದಕ್ಕೆ ಕೇಂದ್ರ ಸರ್ಕಾರ ಸಾಥ್‌ ಕೊಡುತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಚ್ಚುವರಿ ಅಕ್ಕಿ ವಿತರಣೆ ಬಗ್ಗೆ ನಾವು ಡೆಪ್ಯುಟಿ ಮ್ಯಾನೇಜರ್‌ ಜೊತೆ ಚಚಿಸಿದ್ದೆವು ಇದಕ್ಕೆ ಅವರು ಒಪ್ಪಿಗೆಯನ್ನು ಕೂಡ ಸೂಚಿಸಿದ್ದರು. ಆದರೆ ಇದೀಗ ಕೇಂದ್ರ ಸರ್ಕಾರ ಅಕ್ಕಿ ವಿಚಾರದಲ್ಲೂ ರಾಜಕೀಯ ಮಾಡುತ್ತಿದೆ. ಅಕ್ಕಿ ಸಂಗ್ರಹ ಇದ್ದರೂ ಪೂರೈಕೆ ಮಾಡುತ್ತಿಲ್ಲ. ಬಿಜೆಪಿಯವರು ಬಡವರ ವಿರೋಧಿಗಳು, ಕೇಂದ್ರ ನಮಗೆ ಪುಕ್ಕಟೆಯಾಗಿ ಅಕ್ಕಿ ನೀಡುವುದಿಲ್ಲ ಬದಲಾಗಿ ನಾವು ದುಡ್ಡು ಕೊಡುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 
Previous articleಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ: ಜೂನ್‌ 18ರಿಂದ ಆರಂಭ
Next articleನಾಳೆ ಸಿಇಟಿ ಪರೀಕ್ಷೆ ಫಲಿತಾಂಶ ಪ್ರಕಟ