Home ಕಂಬಳ ಬೆಂಗಳೂರಿನಲ್ಲಿ ನಡೆಯುವ ಕಂಬಳಕ್ಕೆ ರಾಜ್ಯಪಾಲರಿಗೆ ಆಹ್ವಾನ

ಬೆಂಗಳೂರಿನಲ್ಲಿ ನಡೆಯುವ ಕಂಬಳಕ್ಕೆ ರಾಜ್ಯಪಾಲರಿಗೆ ಆಹ್ವಾನ

ಮಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕರಾವಳಿಯ ಶ್ರೀಮಂತ ಸಂಸ್ಕೃತಿ ಕಂಬಳ ನವೆಂಬರ್‌ 25 ಮತ್ತು 26 ರಂದು ಅನಾವರಣಗೊಳ್ಳಲಿದೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೆಂಗಳೂರು ಕಂಬಳ ಸಮಿತಿ ಅಧ್ಯಕ್ಷ, ಪುತ್ತೂರು ಶಾಸಕ ಅಶೋಕ್‌ ಕುಮಾರ್‌ ರೈ ಅವರ ಸಮ್ಮುಖದಲ್ಲಿ ನಡೆಯುವ ಕಂಬಳಕ್ಕೆ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಅವರನ್ನು ಆಹ್ವಾನಿಸಲಾಯಿತು.

ರಾಜಭವನದಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಿದ ಶಾಸಕ ಅಶೋಕ್‌ ಕುಮಾರ್‌ ಅವರ ನೇತೃತ್ವದ ತಂಡ ಕಂಬಳದ ಬಗ್ಗೆ ವಿವರಣೆ ಕಾರ್ಯಕ್ರಮಕ್ಕೆ ಆಹ್ವಾನಿಸಿದರು. ಈ ಸಂದರ್ಭ ತುಳು ಕೂಟದ ಅಧ್ಯಕ್ಷ ಸುಂದರ್‌ ರಾಜ್‌ ರೈ, ಬಿಬಿಎಂಪಿ ಮಾಜಿ ಕಾಪೊರೇಟರ್‌ ಉಮೇಶ್‌ ಶೆಟ್ಟಿ ಸೇರಿದಂತೆ ತುಳು ಕೂಟ ಹಾಗೂ ಕಂಬಳ ಸಮಿತಿ ಪ್ರಮುಖರು ಉಪಸ್ಥಿತರಿದ್ದರು.

ಇನ್ನು, ಬೆಂಗಳೂರಿನಲ್ಲಿ ನಡೆಯುವ ಈ ಕಂಬಳಕ್ಕೆ 100 ರಿಂದ 130 ಜೊತೆ ಕೋಣಗಳು ಭಾಗವಹಿಸಲಿವೆ. ಮಂಗಳೂರಿನಿಂದ ಬೆಂಗಳೂರಿಗೆ ಮೆರವಣಿಗೆ ರೂಪದಲ್ಲಿ ಲಾರಿಯಲ್ಲಿ ಎರಡು ದಿನಗಳ ಮೊದಲೇ ಕೋಣಗಳು ಬೆಂಗಳೂರಿಗೆ ಬರಲಿವೆ. ಕೋಣಗಳ ಜೊತೆಗೆ ಪಶು ವೈದ್ಯರು ಮತ್ತು ಆಂಬುಲೆನ್ಸ್‌ಗಳು ಕೂಡ ಬರಲಿವೆ. ಕಂಬಳಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌ ಸೇರಿದಂತೆ ಹಲವಾರು ರಾಜಕೀಯ ಗಣ್ಯರು ಹಾಗೂ ಚಿತ್ರರಂಗದ ಅನೇಕರು ಆಗಮಿಸಲಿದ್ದಾರೆ ಎನ್ನಲಾಗಿದೆ.

 
Previous articleನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ ಯುವಕನ ಮೃತದೇಹ ಪತ್ತೆ
Next articleಚಿಕ್ಕಬಳ್ಳಾಪುರದಲ್ಲಿ ಝೀಕಾ ವೈರಸ್‌ ಪತ್ತೆ: ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ…