
ಬೆಂಗಳೂರು: ರಾಜ್ಯದಲ್ಲಿ ಮುಂಗಾರಿನ ಅಬ್ಬರ ಮುಂದುವರಿದಿದೆ. ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಇನ್ನೂ 5 ದಿನಗಳ ಕಾಲ ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಮಳೆ ಮುಂದುವರಿಯಲಿದ್ದು, ಈ ಭಾಗಗಳಲ್ಲಿ ಆರಂಜ್ ಅಲಟ್ ಘೋಷಿಸಲಾಗಿದೆ. ಮುಂದಿನ 24 ಗಂಟೆಗಳಲ್ಲಿ ಕರಾವಳಿ ಭಾಗಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ಹಿನ್ನೆಲೆ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಚಿಕ್ಕಮಗಳೂರು, ಶಿವಮೊಗ್ಗ ಭಾಗಗಳಲ್ಲಿಯೂ ಕೂಡ ಉತ್ತಮ ಮಳೆಯಾಗಲಿದ್ದು, ಬೆಂಗಳೂರು ಸಹಿತ ಇತರ ಜಿಲ್ಲೆಗಳಲ್ಲೂ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
