Home ಸುದ್ದಿಗಳು ರಾಜ್ಯ ಕಾಂಗ್ರೆಸ್ ಅನುಷ್ಠಾನಕ್ಕೆ ತಂದಿರುವ ಗ್ಯಾರಂಟಿ ಯೋಜನೆಗಳು ಸರಿಯಾಗಿ ಜನರಿಗೆ ತಲುಪುತ್ತಿಲ್ಲ

ಕಾಂಗ್ರೆಸ್ ಅನುಷ್ಠಾನಕ್ಕೆ ತಂದಿರುವ ಗ್ಯಾರಂಟಿ ಯೋಜನೆಗಳು ಸರಿಯಾಗಿ ಜನರಿಗೆ ತಲುಪುತ್ತಿಲ್ಲ

0
ಕಾಂಗ್ರೆಸ್ ಅನುಷ್ಠಾನಕ್ಕೆ ತಂದಿರುವ ಗ್ಯಾರಂಟಿ ಯೋಜನೆಗಳು ಸರಿಯಾಗಿ ಜನರಿಗೆ ತಲುಪುತ್ತಿಲ್ಲ

ಲಕ್ಷ್ಮೇಶ್ವರ: ಕಾಂಗ್ರೆಸ್ ಅನುಷ್ಠಾನಕ್ಕೆ ತಂದಿರುವ ಗ್ಯಾರಂಟಿ ಯೋಜನೆಗಳು ಸರಿಯಾಗಿ ಜನರಿಗೆ ತಲುಪುತ್ತಿಲ್ಲ. ವಿಶೇಷವಾಗಿ ಗೃಹಲಕ್ಷ್ಮೀ ಯೋಜನೆಯಡಿ ಇನ್ನೂ ಬಹಳಷ್ಟು ಮಹಿಳೆಯರಿಗೆ ಹಣ ಬಂದಿಲ್ಲ ಎಂದು ಬಸವರಾಜ ಬೊಮ್ಮಾಯಿ ಆರೋಪ ಮಾಡಿದ್ದಾರೆ.

ಅವರು ಇಂದು ಬಸಾಪುರ, ರಾಮಗೇರಿ, ಶಿಗ್ಲಿ, ದೊಡ್ಡೂರು, ಸೂರಣಗಿ ಗ್ರಾಮಗಳಲ್ಲಿ ರೋಡ್ ಶೋ ನಡೆಸುವ ಮೂಲಕ ಮತಯಾಚನೆ ಮಾಡಿದರು. ಬಿಜೆಪಿಗೆ ಭಾರೀ ಬೆಂಬಲ ವ್ಯಕ್ತವಾಗುತ್ತಿದೆ. ಎಲ್ಲ ವರ್ಗಗಳ ಜನರೂ ಬಹಿರಂಗವಾಗಿ ಬಂದು ಬೆಂಬಲ ಸೂಚಿಸುತ್ತಿದ್ದಾರೆ. ಹೀಗಾಗಿ ದೊಡ್ಡ ಅಂತರದಿಂದ ನಾನು ಗೆಲ್ಲುವ ವಿಶ್ವಾಸ ಇದೆ ಎಂದು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರು ದೇಶದಲ್ಲಿ ಭಯೋತ್ಪಾದನೆ ಹತ್ತಿಕ್ಕಿದ್ದಾರೆ. ಭಯೋತ್ಪಾದಕರು ಇರುವಲ್ಲಿಗೆ ಹೋಗಿ ಅವರನ್ನು ಸದೆ ಬಡಿದಿದ್ದಾರೆ. ಗ್ರಾಮೀಣ ಭಾಗದ ಮಹಿಳೆಯರ ಆರೋಗ್ಯದ ದೃಷ್ಟಿಯಿಂದ ಉಜ್ವಲಾ ಯೋಜನೆಯಡಿ ಉಚಿತ ಗ್ಯಾಸ್ ವಿತರಿಸಿದ್ದಾರೆ. ರೈತರಿಗಾಗಿ ಹತ್ತು ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಬಡವರು ಹಸಿವೆಯಿಂದ ನರಳಬಾರದು ಎಂಬ ಕಾರಣಕ್ಕಾಗಿ ಪ್ರತಿಯೊಬ್ಬರಿಗೂ ಉಚಿತವಾಗಿ ಅಕ್ಕಿ ಕೊಡುತ್ತಿದ್ದಾರೆ ಎಂದು ಹೇಳಿದರು.

 

LEAVE A REPLY

Please enter your comment!
Please enter your name here