Home ರಾಜ್ಯ ರಶ್ಮಿಕಾ ರಾಜಕಾರಣ: ಕಾಂಗ್ರೆಸ್ ಶಾಸಕನ ಹೇಳಿಕೆ ಖಂಡಿಸಿದ ಬಿಜೆಪಿ ಶಾಸಕ ಭರತ್ ಶೆಟ್ಟಿ

ರಶ್ಮಿಕಾ ರಾಜಕಾರಣ: ಕಾಂಗ್ರೆಸ್ ಶಾಸಕನ ಹೇಳಿಕೆ ಖಂಡಿಸಿದ ಬಿಜೆಪಿ ಶಾಸಕ ಭರತ್ ಶೆಟ್ಟಿ

ಬೆಂಗಳೂರು: ಕಾಂಗ್ರೆಸ್ ಶಾಸಕ ರವಿಕುಮಾರ್ ಗೌಡ ಅವರು ನಟಿ ರಶ್ಮಿಕಾ ಮಂದಣ್ಣ ಕುರಿತು ಮಾಡಿರುವ ಬೆದರಿಕೆ ಮತ್ತು ಟೀಕೆಗಳನ್ನು ಬಿಜೆಪಿ ಶಾಸಕ ಭರತ್ ಶೆಟ್ಟಿ ತೀವ್ರವಾಗಿ ಖಂಡಿಸಿದ್ದಾರೆ.

ರಾಜಕೀಯ ಲಾಭಕ್ಕಾಗಿ ರಶ್ಮಿಕಾ ಅವರ ಹೆಸರನ್ನು ಬಳಸಲಾಗುತ್ತಿದೆ. ಕಾಂಗ್ರೆಸ್ ಪಕ್ಷದೊಳಗಿನ ಕೆಲವು ಸದಸ್ಯರು ಗೂಂಡಾಗಳ ರೀತಿಯಲ್ಲಿ ವರ್ತಿಸುತ್ತಿದ್ದಾರೆ. ದೇಶದಲ್ಲಿ ಯಾವುದೇ ವ್ಯಕ್ತಿಗೆ ಕಾರ್ಯಕ್ರಮಕ್ಕೆ ಬರುವ ಅಥವಾ  ಬರದಿರುವ ಹಕ್ಕಿದೆ. ರಾಜಕಾರಣಿಗಳು ಬಹಿರಂಗವಾಗಿ ಅವರಿಗೆ ಈ ರೀತಿ ಬೆದರಿಕೆ ಹಾಕುವುದು ಸರಿಯಲ್ಲ. ರಕ್ಷಣೆ ನೀಡಬೇಕಾದ ಜನರು ಬೆದರಿಕೆ ಹಾಕುತ್ತಿದ್ದಾರೆ. ಅದು  ತಪ್ಪು ಎಂದು ಭರತ್ ಶೆಟ್ಟಿ ಹೇಳಿದ್ದಾರೆ.

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನಾ ಕಾರ್ಯಕ್ರಮಕ್ಕೆ ಆಹ್ವಾನದ ಹೊರತಾಗಿಯೂ ನಟಿ ರಶ್ಮಿಕಾ ಮಂದಣ್ಣ ಗೈರಾಗಿದ್ದರು. ರಶ್ಮಿಕಾ ಮಾತ್ರವಲ್ಲದೆ ಕನ್ನಡ ಚಿತ್ರರಂಗದ ಅನೇಕ ಗಣ್ಯರು ಗೈರಾಗಿದ್ದು, ಇದೇ ವಿಚಾರವಾಗಿ ಡಿಸಿಎಂ ಡಿಕೆ ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದರು. ಅವರ ಹೇಳಿಕೆಗಳನ್ನು ಬೆಂಬಲಿಸುತ್ತಾ ಶಾಸಕ ರವಿಕುಮಾರ್ ಗೌಡ ಗಣಿಗ ನಟಿ ರಶ್ಮಿಕಾಗೆ ಪಾಠಕಲಿಸುವ ಎಚ್ಚರಿಕೆ ನೀಡಿದ್ದರು.

ಕಾಂಗ್ರೆಸ್ ಶಾಸಕನ ಈ ಹೇಳಿಕೆಯನ್ನು ಕೊಡವ ನ್ಯಾಷನಲ್ ಕೌನ್ಸಿಲ್ ಖಂಡಿಸಿದೆ ಮತ್ತು ರಶ್ಮಿಕಾಗೆ ಭದ್ರತೆ ನೀಡುವಂತೆ ಕೇಂದ್ರ ಹಾಗೂ ರಾಜ್ಯದ ಗೃಹಸಚಿವರನ್ನು ಒತ್ತಾಯಿಸಿದೆ.

 

 

 
Previous articleICC Champions Trophy: ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದ 4ನೇ ನಾಯಕ ರೋಹಿತ್ ಶರ್ಮಾ
Next articleಚಿನ್ನ ಕಳ್ಳಸಾಗಣೆ ಪ್ರಕರಣ: ತರುಣ್​ ರಾಜ್ ಬಂಧನ; ಇಬ್ಬರು ಸಚಿವರ ಕೈವಾಡದ ಶಂಕೆ